BBMP
Loading ...

BBMP BJP

ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಮತ್ತು ಕಾನೂನು ಹೋರಾಟ ನಡೆಸುವ ಸಂಬಂಧ ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ.

ಪಕ್ಷದ ಬೆಂಗಳೂರು ನಗರ ಕಚೇರಿಯಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ, ಬಿಬಿಎಂಪಿಯ ಮಾಜಿ ಸದಸ್ಯರು ಶನಿವಾರ ಸಭೆ ನಡೆಸಿ, ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದರೆ ಚುನಾವಣಾ ಸಮೀಕರಣ ಬದಲಾಗುತ್ತದೆ. ಚುನಾಯಿತ ಜನಪ್ರತಿನಿಧಿಗಳ ಅಧಿಕಾರ ಕಡಿಮೆಯಾಗುತ್ತದೆ ಎಂಬುದರ ಬಗ್ಗೆಯೂ ಚರ್ಚೆಯಾಗಿದೆ. ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು ಶಿಕ್ಷೆ

Leave a Reply

Your email address will not be published. Required fields are marked *