ChatGPT Image Oct 3, 2026, 08_41_04 PM-modified
GREATER BENGALURU NEWS 9
BJP

ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ಮಂಡಲ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮತ್ತಿಕೆರೆಯಲ್ಲಿ ನಡೆದಿದೆ.

ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಯಶವಂತಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಮಂಡಲಕ್ಕೆ ಒಂದು ದಿನದ ಹಿಂದೆಯಷ್ಟೇ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಯಗಳ ನೇಮಕವಾಗಿತ್ತು ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ಪತಿಯನ್ನು ಕಳೆದುಕೊಂಡಿದ್ದ ಮಂಜುಳಾ, ಮಾನಸಿಕವಾಗಿ ನೊಂದಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿತ್ತು. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇಂದು ಮಧ್ಯಾಹ್ನ 2:30ರ ಸುಮಾರಿಗೆ ಮತ್ತಿಕೆರೆಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಮಾಜಿ ಡಿಎಸಿಂ ಡಾ.ಸಿ.ಎನ್.ಅಶ್ವಥ್‌ ನಾರಾಯಣ್‌ ತೆರಳಿದ್ದಾರೆ.

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್!

Leave a Reply

Your email address will not be published. Required fields are marked *