BBMP
Loading ...

DKS

Greater Bengaluru News9 : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆಗೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆ ಮೂಲಕ ಬಾಂಬ್ ಬೆದರಿಕೆ ಕಾಟ ಇದೀಗ ಮತ್ತೊಂದು ಮಜಲಿಗೆ ತಲುಪಿದೆ. ತಮಿಳುನಾಡಿನ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು,

ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಆರ್ನಾ ಅಶ್ವಿನ್ ಶೇಖರ್ (aarna.ashwinshekher@outlook.com) ಎಂಬಾತನ ಐಡಿಯಿಂದ ಡಿಸಿಎಂ ಡಿಕೆ ಶಿವಕುಮಾರ್​​ ಇ-ಮೇಲ್​ ಐಡಿಗೆ ಬಾಂಬ್​ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಆರು ಆರ್​​ಡಿಎಕ್ಸ್ ಬಾಂಬ್​​ಗಳು ಇಬ್ಬರ ಮನೆಯಲ್ಲೂ ಫಿಕ್ಸ್ ಆಗಿದೆ.​ ರಿಮೋಟ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಬಾಂಬ್ ಸ್ಕ್ವಾಡ್ ತಕ್ಷಣ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಹುಸಿಬಾಂಬ್ ಕರೆ ಬಂದ ಹಿನ್ನೆಲೆ ಅಶ್ವತ್ಥ್ ನಾರಾಯಣಸ್ವಾಮಿ ಎಂಬುವವರ ದೂರು ಆಧರಿಸಿ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

Leave a Reply

Your email address will not be published. Required fields are marked *