Greater Bengaluru News9: ಸರ್ಕಾರಿ ಕಚೇರಿಗಳಲ್ಲಿ ಲಂಚ ಕೊಡದೆ ಯಾವ ಕೆಲಸವೂ ನಡೆಯುವುದಿಲ್ಲ ಎಂಬ ಆರೋಪವಿದೆ. ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡರೂ ಲಂಚದ ಪಿಡುಗನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ. ಈಗ ರಾಜಧಾನಿ ಬೆಂಗಳೂರಿನಲ್ಲಿ ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್ಒ ಶಿವಕುಮಾರ್ ಅವರ ಮಗಳ ಸಾವಿನ ನಂತರದ ಪ್ರತಿಯೊಂದು ಹಂತದಲ್ಲೂ ಲಂಚಕ್ಕಾಗಿ ಅಧಿಕಾರಿಗಳು ಪೀಡಿಸಿದ ಮತ್ತೊಂದು ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ.
ನಿವೃತ್ತ ಸಿಎಫ್ಒ ಶಿವಕುಮಾರ್ ಅವರ ತಮ್ಮ ಮಗಳ ಮರಣದ ನಂತರ ಬೆಂಗಳೂರಿನಲ್ಲಿ ಅಧಿಕಾರಿಗಳಿಂದ ತಾವು ಎದುರಿಸಿದ ಕಿರುಕುಳ ಮತ್ತು ಲಂಚಕ್ಕೆ ಸಂಬಂಧಿಸಿದ ಅಸಹನೀಯ ಅನುಭವವನ್ನು ಲಿಂಕ್ಡ್ಇನ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಳ್ಳಂದೂರು ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಇದರ ಆಧಾರದ ಮೇಲೆ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
A father loses his daughter- and then has to pay a bribe for her death certificate!
— Akshita Nandagopal (@Akshita_N) October 29, 2025
How low can we sink? https://t.co/9HbLQUkPaM
ಶಿವಕುಮಾರ್ ಅವರಿಂದ ಲಂಚ ಪಡೆದ ಆರೋಪದ ಮೇಲೆ ಬೆಳ್ಳಂದೂರು ಪೊಲೀಸ್ ಠಾಣೆಯ ಪಿಎಸ್ಐ ಸಂತೋಷ್ ಮತ್ತು ಕಾನ್ಸ್ಟೇಬಲ್ ಗೋರಖ್ನಾಥ್ ಅವರನ್ನು ಅಮಾನತು ಮಾಡಲಾಗಿದೆ. ಈ ಅರೋಪ ಬೆಳಕಿಗೆ ಬರುತ್ತಿದ್ದಂತೆ ಅಧಿಕಾರಿಗಳ ಅಮಾನವೀಯ ವರ್ತನೆ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.


