BBMP
Loading ...

Air Show

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವಂತ ರಾಜನಾಥ್ ಸಿಂಗ್ ಅವರು, ದಸರಾ ಏರ್ ಶೋಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

ಬುಧವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಅವರನ್ನೊಳಗೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ವಿವಿಧ ವಿಚಾರಗಳ ಕುರಿತಂತೆ ಚರ್ಚಿಸಲಾಯಿತು.

ಇನ್ನೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆಯೂ ಮನವಿ ಮಾಡಲಾಯಿತು. ಈ ಮನವಿಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ದಸರಾದಲ್ಲಿ ಏರ್ ಶೋಗೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ.

ಗುರು ಪೂರ್ಣಿಮಾ ಹಿನ್ನೆಲೆ ನಂಜಾವಧೂತ ಶ್ರೀಗಳಿಗೆ ಗುರು ನಮನ: ಜುಲೈ 10ರ ಸಂಜೆ 5 ಕ್ಕೆ ಕಾರ್ಯಕ್ರಮ

Leave a Reply

Your email address will not be published. Required fields are marked *