BBMP
Loading ...

Siddaramaiah

Greater Bengaluru News9 : ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಶಾಸಕರು ದೆಹಲಿಯತ್ತ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಈ ನಡುವೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಈ ಕುರಿತು ರಾಜಭವನದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಇತ್ತೀಚೆಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿದ್ದ ಖಾತೆಯನ್ನು ಈಗ ಕೆ. ವೆಂಕಟೇಶ್ ಅವರಿಗೆ ನೀಡಲಾಗಿದೆ.

ಇದೇ ವೇಳೆ ಕೆ. ಎನ್. ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಹಾಗೂ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾಗಿದ್ದ ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಖಾತೆಗಳು ಇನ್ನೂ ಹಂಚಿಕೆಯಾಗದೆ ಮುಖ್ಯಮಂತ್ರಿ Siddaramaiah ಅವರ ಬಳಿಯೇ ಉಳಿದಿವೆ.

ಸಿಎಂ ಅವರು ಈಗಾಗಲೇ ಹಣಕಾಸು, ಸಂಸದೀಯ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಇಲಾಖೆ ಸೇರಿದಂತೆ ಹಲವು ಪ್ರಮುಖ ಖಾತೆಗಳ ಹೊಣೆಗಾರಿಕೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.

ಈ ಬೆಳವಣಿಗೆಗಳ ನಡುವೆ ಸಂಪುಟ ಪುನಾರಚನೆ ನಡೆಯಬಹುದೆಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಹೆಚ್ಚಾಗಿದ್ದು, ಕೆಲ ಸಚಿವರನ್ನು ಕೈಬಿಡುವ ಸಾಧ್ಯತೆಗಳೂ ಕೇಳಿಬರುತ್ತಿವೆ. ಇದರ ನಡುವೆ ಸಚಿವಾಕಾಂಕ್ಷಿಗಳಲ್ಲಿ ಕುತೂಹಲ ಮುಂದುವರಿದಿದೆ.

Leave a Reply

Your email address will not be published. Required fields are marked *