ಚಾಂಪಿಯನ್ಸ್ ಟ್ರೋಫಿ 2025: ಭರ್ಜರಿ ಶತಕ ಸಿಡಿಸುವ ಮೂಲಕ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ದೊಡ್ಡ ಪೆಟ್ಟು ನೀಡಿದ್ದಾರೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಗ್ರೂಪ್ ʼAʼನ 5ನೇ ಪಂದ್ಯದಲ್ಲಿ ಪಾಕಿಸ್ತಾನವ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನ ಕಳೆದುಕೊಂಡು 241 ರನ್ ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿಯನ್ನ ಬೆನ್ನತ್ತಿದ ಭಾರತ 42.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 244 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು.
ವಿರಾಟ್ ಕೊಹ್ಲಿ ಅಮೋಘ ಶತಕದ ನೆರವಿನಿಂದ 2017ರ ಫೈನಲ್ ಸೋಲಿಗೆ ಟೀಂ ಇಂಡಿಯಾ ಪ್ರತೀಕಾರ ತೀರಿಸಿಕೊಂಡಿದೆ. ಭಾರತ ವಿರುದ್ಧ ಸೋತಿರುವ ಪಾಕಿಸ್ತಾನ ಟೂರ್ನಿಯಿಂದ ಬಹುತೇಕ ಔಟ್ ಆದಂತಾಗಿದೆ. ಪಾಕಿಸ್ತಾನಕ್ಕೆ ವಿರಾಟ್ ಕೊಹ್ಲಿ ಮತ್ತೊಮ್ಮೆ ದೊಡ್ಡ ಪೆಟ್ಟು ನೀಡಿದ್ದಾರೆ.


