Greater Bengaluru News9: ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. ಈ ಸಂಭಾವ್ಯ ಸಚಿವರ ಪಟ್ಟಿ ಟಿವಿ9 ವಾಹಿನಿಗೆ ಲಭ್ಯವಾಗಿದೆ.
ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್, ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡು ರಾವ್ ಮತ್ತು ಎನ್.ಎ. ಹ್ಯಾರಿಸ್ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಕೆಲ ಹಿರಿಯರನ್ನು ಮುಂದುವರಿಸುವ ಜೊತೆಗೆ ಹೊಸ ಮುಖಗಳಿಗೂ ಅವಕಾಶ ನೀಡುವ ಸಾಧ್ಯತೆ ಇದೆ. ಹೊಸ ಸರ್ಕಾರ ರಚನೆಯ ಸಂದರ್ಭದಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ನಡೆದಿದ್ದು, ಎಚ್.ಕೆ. ಪಾಟೀಲ್ ಮತ್ತು ಮಹದೇವಪ್ಪ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಅನುಭವದ ಆಧಾರದ ಮೇಲೆ ಮಹದೇವಪ್ಪ ಅವರ ಹೆಸರು ಪ್ರಬಲವಾಗಿದೆ. ಪ್ರಮಾಣ ವಚನ ಸ್ವೀಕಾರದ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ನಿಂದ ಬರಬೇಕಿದೆ.


