ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಚೆಸ್ಕಾಂ)ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎ.ಇ.ಇ.) ಹಾಗೂ ವಿಜಿಲೆನ್ಸ್ ಅಧಿಕಾರಿ ದೀಪಕ್, 3 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಮೈಸೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.
ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಲಂಚ ಪಡೆಯುವಾಗ ಈ ಕಾರ್ಯಾಚರಣೆ ನಡೆದಿದ್ದು, ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮ್ಯಾಥ್ಯು ಥಾಮಸ್ ಮತ್ತು ಇನ್ಸ್ಪೆಕ್ಟರ್ ರವಿಕುಮಾರ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಸರ್ಕಾರಿ ನೌಕರ


