BBMP
Loading ...

Siddaramaiah

ಬೆಂಗಳೂರು : ಅನಾರೋಗ್ಯ ನಿಮಿತ್ತ ಅಮೆರಿಕಕ್ಕೆ ತೆರಳಿದ್ದ ಡಾ.ಶಿವರಾಜ್ ಕುಮಾರ್ ಇದೀಗ ಬೆಂಗಳೂರಿಗೆ ಮರಳಿದ್ದಾರೆ. ಯಾಮಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವರಾಜ್ ಕುಮಾರ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಒಂದು ತಿಂಗಳ ಹಿಂದೆ ತಾಯ್ನಾಡಿಗೆ ಮರಳಿರುವ ಶಿವರಾಜ್ ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ್ದಾರೆ.

ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆಯ ನಂತರ ತಾಯ್ನಾಡಿಗೆ ಹಿಂದಿರುಗಿದ್ದು, ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಆ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿಯೂ ಶಿವರಾಜ್ ಕುಮಾರ್ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ- ಸಚಿವ ಬೈರತಿ ಸುರೇಶ್‌ಗೆ ಇಡಿ ನೊಟೀಸ್

Leave a Reply

Your email address will not be published. Required fields are marked *