BBMP
Loading ...

china

ಬೆಂಗಳೂರು: ಇಡೀ ಜಗತ್ತನ್ನೇ ಗಢಗಢ ನಡುಗಿಸಿದ ಮಹಾಮಾರಿ ಕರೊನಾ ವೈರಸ್​ ತವರು ಚೀನಾ ಎಂಬುದು ಎಲ್ಲರಿಗೂ ತಿಳಿದಿದೆ. ಇದೇ ಚೀನಾದಿಂದ ಇದೀಗ ಮತ್ತೊಂದು ವೈರಸ್​ ಹರಡುತ್ತಿದೆ. ಅದೇ ಎಚ್​ಎಂಪಿವಿ ( ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ) ವೈರಸ್. ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

HMPV ವೈರಸ್​ ಚೀನಾದಲ್ಲಿ ಪತ್ತೆಯಾಗಿದೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ವಿಶ್ವದ ಎಲ್ಲ ರಾಷ್ಟ್ರಗಳು ಅಲರ್ಟ್​ ಆಗಿವೆ. ಭಾರತ ಕೂಡ ವೈರಸ್​ ಬಗ್ಗೆ ಎಚ್ಚರಿಕೆಯನ್ನು ವಹಿಸಿದೆ. ಆದರೆ, ಬೆಂಗಳೂರಿನಲ್ಲಿ ಈ ವೈರಸ್​ ಪತ್ತೆಯಾಗಿರುವುದು ಭಾರಿ ಆತಂಕಕ್ಕೆ ದಾರಿ ಮಾಡಿಕೊಟ್ಟಿದೆ. ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ HMPV ವೈರಸ್​ ಪತ್ತೆಯಾಗಿದೆ.

ಜ್ವರ ಹಿನ್ನೆಲೆಯಲ್ಲಿ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್​ ಇರುವುದು ಪತ್ತೆಯಾಗಿದೆ. ಆದರೆ, ಈ ವೈರಸ್​ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.

2001ರಲ್ಲಿ ಪತ್ತೆಯಾದ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ (HMPV), ನ್ಯುಮೊವಿರಿಡೆ ಕುಟುಂಬಕ್ಕೆ ಸೇರಿದ್ದು, ಇದು ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ಅನ್ನು ಸಹ ಒಳಗೊಂಡಿದೆ. 2001 ರಲ್ಲಿ ಅಧಿಕೃತವಾಗಿ ಗುರುತಿಸಲ್ಪಟ್ಟಿದ್ದರೂ ಸಹ, HMPV ಮಾನವರಲ್ಲಿ 60 ವರ್ಷಗಳಿಂದ ಅಸ್ತಿತ್ವದಲ್ಲಿದೆ ಮತ್ತು ಪ್ರಪಂಚದಾದ್ಯಂತ ಕಂಡುಬರುತ್ತದೆ ಎಂದು ಅಧ್ಯಯನಗಳು ತೋರಿಸಿವೆ.

ಈ ವೈರಸ್ ಎಲ್ಲ ವಯಸ್ಸಿನ ವ್ಯಕ್ತಿಗಳಲ್ಲಿ ಉಸಿರಾಟದ ಸಮಸ್ಯೆಗಳನ್ನು ಉಂಟುಮಾಡಬಹುದು. ಆದರೂ ಚಿಕ್ಕ ಮಕ್ಕಳು, ಹಿರಿಯರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ.

ಈ ವೈರಸ್​ನ ಲಕ್ಷಣಗಳು ಯಾವುವೆಂದರೆ, ಕೆಮ್ಮು, ಜ್ವರ, ಮೂಗು ಕಟ್ಟುವುದು ಮತ್ತು ಉಸಿರಾಟದ ತೊಂದರೆ ಸೇರಿದಂತೆ ಇನ್ನಿತರ ಲಕ್ಷಣಗಳಿವೆ.

ನೀವು ತಂದೆಯ ಸಮಾನ ಎಂದರು ಬಿಡ್ಲಿಲ್ಲ : ಡಿವೈಎಸ್ಪಿ ರಾಮಚಂದ್ರಪ್ಪನ ಮತ್ತೊಂದು ‘ಕಾಮಪುರಾಣ’ ಬಯಲಿಗೆಳೆದ ಮಹಿಳೆ!

Leave a Reply

Your email address will not be published. Required fields are marked *