BBMP
Loading ...

Chinnaswamy stadium stampede

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ.

ಅಹಮಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್ ಫೈನಲ್ ಪಂದ್ಯದಲ್ಲಿ ಜಯ ಗಳಿಸಿದ ಆರ್​​ಸಿಬಿ ತಂಡ ಬುಧವಾರ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿತ್ತು. ತಂಡದ ಆಟಗಾರರಿಗೆ ಹಾಗೂ ಸಿಬ್ಬಂದಿಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಸರ್ಕಾರದ ಸನ್ಮಾನ ಆದ ಬಳಿಕ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಲ್ಲೂ ಚಿನ್ನಸ್ವಾಮಿ ಸ್ಟೇಡಿಯಂಗೆ ಅಭಿಮಾನಿಗಳಿಗೆ ಉಚಿತ ಪ್ರವೇಶ ಇತ್ತು. ಹೀಗಾಗಿ ಬೆಳಗಿನಿಂದಲೇ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಹೀಗೆ ಬಂದವರು ಸ್ಟೇಡಿಯಂಗೆ ಪ್ರವೇಶಿಸುವಾಗ ನೂಕುನುಗ್ಗಲು ಆಗಿದ್ದು, 11 ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ

ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ವಿವರ:
ಭೂಮಿಕ್, 20 ವರ್ಷ (ನೆಲಮಂಗಲ)
ಸಹನ 19 ವರ್ಷ (ಕೋಲಾರ)
ಪೂರ್ಣಚಂದ್, 32 ವರ್ಷ (ಮಂಡ್ಯ)
ಚಿನ್ಮಯಿ, 19 ವರ್ಷ
ದಿವ್ಯಾಂಶಿ, 13 ವರ್ಷ
ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ)
ದೇವಿ, 29 ವರ್ಷ
ಶಿವಲಿಂಗ್, 17 ವರ್ಷ
ಮನೋಜ್, 33 ವರ್ಷ (ತುಮಕೂರು)
ಅಕ್ಷತಾ, (ಮಂಗಳೂರು)
ಹೆಸರು ಪತ್ತೆಯಾಗಿಲ್ಲ, 20 ವರ್ಷ ವೈದೇಹಿ ಆಸ್ಪತ್ರೆ

ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಮಧ್ಯರಾತ್ರಿಯೇ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ.

ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ಸೇರಿ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

Leave a Reply

Your email address will not be published. Required fields are marked *