BBMP
Loading ...

DK Shivakumar

Greater Bengaluru News9 : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾಗೂ ನಂತರ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು.

“ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ರಾಜ್ಯದ ಬರ ಪರಿಸ್ಥಿತಿ ಅವಲೋಕಿಸಬೇಕು. ರೈತರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ. ಜಿಲ್ಲಾಡಳಿತವು ಗ್ರಾಮೀಣ ಭಾಗದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಕೆಗೆ 1 ಕೋಟಿ ರೂ.ವರೆಗೆ ಖರ್ಚು ಮಾಡಬಹುದು ಎಂದು ಬೆಳಗಾವಿ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಈ ಬಗ್ಗೆ ನಿರ್ಲಕ್ಷ್ಯ ಸಲ್ಲದು” ಎಂದು ಎಚ್ಚರಿಸಿದರು.

ಬೆಳೆ ವಿಮೆ ಬಗ್ಗೆ ರೈತರಿಗೆ ಅಧಿಕಾರಿಗಳು ನೆರವಾಗಬೇಕು. ಅರಿವು ಮೂಡಿಸಬೇಕು. ರೈತರು ಯಾವುದೇ ಕಾರಣಕ್ಕೂ ಮುಂದಿನ ಮಳೆ, ಅಣೆಕಟ್ಟು ನೀರು ನೆಚ್ಚಿಕೊಂಡು ಬೆಳೆ ಹಾಕಬಾರದು. ನೀರಾವರಿ ಸಮಿತಿ, ಅಧಿಕಾರಿಗಳು ಹಾಗೂ ಸರ್ಕಾರದ ಮಾರ್ಗದರ್ಶನ ಆಧಾರದ ಮೇಲೆ ಬೆಳೆ ಹಾಕಿಕೊಳ್ಳಬೇಕು. ನಿಮ್ಮಷ್ಟಕ್ಕೆ ನೀವೆ ಬೆಳೆ ಹಾಕಿದರೆ ನಷ್ಟಕ್ಕೆ ನೀವೇ ಹೊಣೆಯಾಗಬೇಕಾಗುತ್ತದೆ. ನಮ್ಮಿಂದ ಸಹಕಾರ ನೀಡಲು ಆಗುವುದಿಲ್ಲ. ಆಲಮಟ್ಟಿ ಹೊರತಾಗಿ ಬೇರೆ ಯಾವ ಜಲಾಶಯದಲ್ಲೂ ನೀರಿನ ಪರಿಸ್ಥಿತಿ ಉತ್ತಮವಾಗಿಲ್ಲ ಎಂದರು.

1 ಕೋಟಿ ಕುಟುಂಬಗಳಿಗೆ 1 ವರ್ಷದಲ್ಲಿ ಇ ಖಾತಾ ಹಂಚಿಕೆ ಮಾಡಬೇಕು. ಪ್ರತಿ ತಾಲ್ಲೂಕಿನಲ್ಲಿ ವಸತಿ ರಹಿತರಿಗೆ ನಿವೇಶನ ನೀಡಬೇಕು. ಜಿಲ್ಲಾಧಿಕಾರಿಗಳು ಭೂ ಬ್ಯಾಂಕ್ ರಚಿಸಬೇಕು. ಪ್ರತಿಯೊಬ್ಬರು ಸ್ವಂತ ಸೂರು ಹೊಂದಿರಬೇಕು. ತಕ್ಷಣವೇ ವಿಬಿಜಿ ರಾಮ್ ಜೀ ಕಾಮಗಾರಿಗಳನ್ನು ಬೇಗ ಕೈಗೆತ್ತಿಕೊಳ್ಳಬೇಕು ಎಂದರು‌.

Leave a Reply

Your email address will not be published. Required fields are marked *