BBMP
Loading ...

Siddaramaiah

ಬೆಂಗಳೂರು: 2019-20 ರಿಂದ 2022-23ರ ವರೆಗೆ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಸಂಬಂಧ ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ವಿಚಾರಣಾ ಆಯೋಗದ ತನಿಖಾ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದರು.

ನ್ಯಾ. ಹೆಚ್.ಎನ್.ನಾಗಮೋಹನ್​ ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗವು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಅವರಿಗೆ ತಮ್ಮ ವರದಿ ಸಲ್ಲಿಸಿತು. ಈ ವೇಳೆ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವ ಕೆ‌.ಹೆಚ್ ಮುನಿಯಪ್ಪ, ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಮತ್ತಿತರರು ಉಪಸ್ಥಿತರಿದ್ದರು.

ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8,900 ಪುಟಗಳನ್ನು ಹೊಂದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಹಾಗೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಶಿಫಾರಸು ಮಾಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23ರ ವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಉಪ ಮುಖ್ಯಮಂತ್ರಿಗಳು 2023ರಲ್ಲಿ ಟಿಪ್ಪಣಿ ಮೂಲಕ ಮುಖ್ಯಮಂತ್ರಿಗಳಿಗೆ ಕೋರಿದ್ದರು.

2023ರ ಆಗಸ್ಟ್ 5 ರಂದು ತಜ್ಞರನ್ನೊಳಗೊಂಡ 4 ವಿಶೇಷ ತನಿಖಾ ಸಮಿತಿಗಳನ್ನು ರಚಿಸಿ ಪರಿಪೂರ್ಣ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು. ಬಳಿಕ 2023ರ ಡಿಸೆಂಬರ್ 15 ರಂದು 4 ವಿಶೇಷ ತನಿಖಾ ಸಮಿತಿಗಳನ್ನು ಹಿಂಪಡೆದು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್​ ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ತನಿಖೆಯನ್ನು ವರ್ಗಾಯಿಸಲಾಗಿತ್ತು.

Leave a Reply

Your email address will not be published. Required fields are marked *