BBMP
Loading ...

Siddaramaiah Dasara

ಮೈಸೂರು,: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಒಂದು ದಿನ ಬಾಕಿ ಇದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ಇಂದು ರಾತ್ರಿ 8.30ಕ್ಕೆ ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 3 ಗುರವಾರದಂದು ನಡೆಯುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು ಅದರ ವಿವರ ಈ ಕೆಳಕಂಡಂತಿದೆ.

02/10/2024 ಬುಧವಾರ
* ರಾತ್ರಿ 8 ಗಂಟೆಗೆ: ಹೆಚ್.ಎ.ಎಲ್ ವಿಮಾನ ನಿಲ್ದಾಣ, ಬೆಂಗಳೂರು (ವಿಶೇಷ ವಿಮಾನ V1 MEI ಮೂಲಕ)
* ರಾತ್ರಿ 08.25 : ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮನ, ಮೈಸೂರಿನಲ್ಲೇ ವಾಸ್ತವ್ಯ

03/10/2024: ಗುರುವಾರ
* ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 09.15ಕ್ಕೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ 2024ರ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ
* ಬೆಳಿಗ್ಗೆ 11.30ಕ್ಕೆ ಘಟಿಕೋತ್ಸವ ಭವನ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯ ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ
* ಮಧ್ಯಾಹ್ನ 12.30ಕ್ಕೆ ಕುಪ್ಪಣ್ಣ ಪಾರ್ಕ್ (ನಿಶಾದ್ ಬಾಗ್) ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ.
* ಸಂಜೆ 4ಗಂಟೆಗೆ ಶ್ರೀ ದೇವರಾಜ್ ಅರಸು ವಿವಿಧೋದ್ದೇಶ ಕ್ರೀಡಾಂಗಣ. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮೈಸೂರು ಇಲ್ಲಿ ಆಯೋಜಿಸಿರುವ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನೆ ಮಾಡಲಿದ್ದಾರೆ.
* ಸಂಜೆ 4.30ಕ್ಕೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿ.ಎಂ. ಕಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
* ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ
* ರಾತ್ರಿ 7.30ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ವಸ್ತು ಪ್ರದರ್ಶನ ಉದ್ಘಾಟನೆ ಮಾಡಿ ಅಂದು ರಾತ್ರಿ ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 4 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ವಿಮಾನನಿಲ್ದಾಣದಿಂದ ಹೊರಟು ಕೊಪ್ಪಳ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ: ಮಾರ್ಗ ಸೂಚಿ ಹೊರಡಿಸಿದ ರಾಜ್ಯ ಸರ್ಕಾರ

Leave a Reply

Your email address will not be published. Required fields are marked *