ಬೆಂಗಳೂರು : ವಿಧಾನ ಮಂಡಲ ಅಧಿವೇಶನದಲ್ಲಿ ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂದು ಆರ್ಎಸ್ಎಸ್ ಗೀತೆಯನ್ನ ಹಾಡಿ ಡಿಸಿಎಂ ಡಿಕೆ ಶಿವಕುಮಾರ್ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ಷಮೆಯಾಚಿಸಿದ ಬಳಿಕವೂ ಡಿಕೆ ಶಿವಕುಮಾರ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮತ್ತೊಂದೆಡೆ ಚಾಮುಂಡೇಶ್ವರಿ ಹಿಂದೂಗಳ ಸ್ವತ್ತಲ್ಲ ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ರು. ಡಿಸಿಎಂ ವಿವಾದಿತ ಹೇಳಿಕೆಗಳು ವಿಪಕ್ಷಗಳಿಗೆ ಅಸ್ತ್ರವಾಗಿತ್ತು. ಡಿಕೆ ಶಿವಕುಮಾರ್ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆ ಜೆಡಿಎಸ್ ಸೋಶಿಯಲ್ ಮೀಡಿಯಾ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ.
ಜೆಡಿಎಸ್ ವಿರುದ್ಧ ದೂರು
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದ್ದು, ಜೆಡಿಎಸ್ ಸಾಮಾಜಿಕ ಜಾಲತಾಣ ನಿರ್ವಹಣ ಸಿಬ್ಬಂದಿ ವಿರುದ್ದ ದೂರು ದಾಖಲಿಸಲಾಗಿದೆ. AICC ಯ ಲೆಟರ್ ಹೆಡ್ ನಕಲು ಮಾಡಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ ಆರೋಪ ಕೇಳಿಬಂದಿದೆ.
ವಕೀಲ ಧನಂಜಯ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣ ಸಿಬ್ಬಂದಿ ವಿರುದ್ಧ ಎಫ್. ಐ.ಆರ್. ದಾಖಲಾಗಿದ್ದು, ಪ್ರಕರಣ ತನಿಖೆಯಲ್ಲಿದೆ.
ಒಂದರ ಮೇಲೆಂದು ವಿವಾದ
ಇನ್ನೊಂದು ವಿವಾದಕಾರಿ ಹೇಳಿಕೆಯನ್ನು ನೀಡಿದ್ದಾರೆ. ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವ ವಿಚಾರದ ವೇಳೆ ಪ್ರತಿಕ್ರಿಯೆ ನೀಡುತ್ತಾ, ” ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ. ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ರು.
“ಚಾಮುಂಡಿ ಬೆಟ್ಟ ಮತ್ತು ಚಾಮುಂಡೇಶ್ವರಿ ದೇವಿ ಎಲ್ಲ ಧರ್ಮದವರಿಗೂ ಸೇರಿದ್ದು, ಅದು ಕೇವಲ ಹಿಂದೂಗಳ ಆಸ್ತಿಯಲ್ಲ” ಎಂದು ಶಿವಕುಮಾರ್ ಹೇಳಿದ್ದು, ವಿರೋಧ ಪಕ್ಷದ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಇದಾದ ನಂತರ ಹೈಕಮಾಂಡ್ ವಾರ್ನಿಂಗ್ ಕೊಟ್ಟಿದ್ದು, ಡಿಕೆಶಿ ಬೇಸರಗೊಂಡಿದ್ದಾರೆ ಎಂದು ಹೇಳಲಾಗಿದೆ.


