ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಪ್ರತಿಪಕ್ಷ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯಗೂ ಟಿಕೆಟ್ ನೀಡಲಾಗಿದೆ.
ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.
ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಎನ್.ಎಸ್. ಬೋಸರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಡಾ.ಕೆ ಗೋವಿಂದರಾಜು, ಐವಾನ್ ಡಿಸೋಜ ಹಾಗೂ ಬಸನಗೌಡ ಬಾರ್ದಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಗಮನಾರ್ಹ ಸಂಗತಿ ಏನೆಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಟಿಕೆಟ್ ನೀಡಲಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ, ಯತೀಂದ್ರ ಅವರು ಶಾಸಕರಾಗಿದ್ದರು. ಆದರೆ, ಕಳೆದ ವರ್ಷ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂಬ ಕಾಂಗ್ರೆಸ್ ನೀತಿಯಿಂದಾಗಿ ಯತೀಂದ್ರ ಅವರಿಗೆ ಟಿಕೆಟ್ ಮಿಸ್ ಆಗಿತ್ತು.

ಇದೀಗ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಪುತ್ರನಿಗೆ ಟಿಕೆಟ್ ಕೊಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮೇಲುಗೈ ಸಾಧಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ: ನಾಳೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ


