ಬೆಂಗಳೂರು: ರಾಜ್ಯ ಕಾಂಗ್ರೆಸ್ ಸದ್ದಿಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಿದ್ಧತೆ ಶುರು ಮಾಡಿಕೊಂಡಿದೆ. ರಾಜ್ಯದ ಪ್ರಮುಖ ಹಾಗೂ ಬೃಹತ್ ಪಾಲಿಕೆಗಳಲ್ಲಿ ಬಿಬಿಎಂಪಿ ಸೇರಿದೆ. ಕಳೆದ 5 ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಬಿಬಿಎಂಪಿ ಚುನಾವಣೆ ನಡೆಯುದೆ ಇರುವುದರಿಂದ ಬೆಂಗಳೂರಿನಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇದರ ನಡುವೆ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಫೆಬ್ರವರಿ 25ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಇದೀಗ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಮೊದಲ ಹೆಜ್ಜೆ ಇರಿಸಿದೆ. ಹೌದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೊಟ್ಟಿರುವ ಹೇಳಿಕೆಯೇ ಇದಕ್ಕೆ ಕಾರಣ. ಒಲ್ಲದ ಮನಸ್ಸಿನಿಂದಲೇ ಕಾಂಗ್ರೆಸ್ ಬಿಬಿಎಂಪಿ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಶುರು ಮಾಡಿದೆ. ಈಚೆಗೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯ ತಂತ್ರವನ್ನೇ ಇಲ್ಲೂ ಅನುಸರಿಸುವ ಪ್ಲ್ಯಾನ್ ಇದೆ.
ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳಿಗೂ ಬೇಕಾಗಿಲ್ಲ ಎಂದೇ ಹೇಳಲಾಗುತ್ತಿತ್ತು. ಅದರಂತೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಬಿಬಿಎಂಪಿ ಚುನಾವಣೆಯನ್ನು ನಡೆಸಿಲ್ಲ. ಒಂದಿಲ್ಲೊಂದು ಕಾರಣವನ್ನು ನೀಡುವ ಮೂಲಕ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಲ್ಲೇ ಇವೆ. ಇನ್ನು ಇದೀಗ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿರ್ಣಾಯಕ ತೀರ್ಪು ನೀಡಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವುದು ಅನಿವಾರ್ಯವಾಗಲಿದ್ದು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೆಲಸ ಪ್ರಾರಂಭಿಸಿದ್ದಾರೆ.
ಬ್ರ್ಯಾಂಡ್ ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ಬೆಂಗಳೂರನ್ನು ಅಭಿವೃದ್ಧಿ ಮಾಡುವುದಾಗಿಯೂ. ಇಲ್ಲಿನ ರಸ್ತೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಮಾಡುವುದಾಗಿಯೂ ಅವರು ಹೇಳಿದ್ದಾರೆ. ಭಾನುವಾರ ನಗರ ಪ್ರದಕ್ಷಣೆಯನ್ನು ಪ್ರಾರಂಭಿಸಿರುವ ಅವರು, ವಿವಿಧ ಕಾಮಗಾರಿಗಳ ಕ್ವಾಲಿಟಿ ಚೆಕ್ ಮಾಡುವುದಾಗಿ ಹೇಳಿದ್ದಾರೆ. ಹಂತ ಹಂತವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಲಾಗುವುದು. ಬೆಂಗಳೂರಿನ ಅಭಿವೃದ್ಧಿಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ.
ಬಜೆಟ್‌ನಲ್ಲಿ ಬಂಪರ್: ಇನ್ನು ಈ ಬಾರಿ ಬಿಬಿಎಂಪಿ ಚುನಾವಣೆ ನಡೆಸುವ ಅನಿವಾರ್ಯತೆ ಇರುವುದರಿಂದ 2025-26ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆಗಳನ್ನು ಕೊಟ್ಟು ಜನರನ್ನು ಸೆಳೆಯುವ ನಿರೀಕ್ಷೆ ಇದೆ. ಅಲ್ಲದೆ ಆಸ್ತಿ ಹಾಗೂ ಖಾತಾ ಸೇವೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ನಗರದಲ್ಲಿ ಸಾಲು ಸಾಲು ಸಮಸ್ಯೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯದೆ ಇರುವುದರಿಂದ ಮೇಯರ್, ಉಪ ಮೇಯರ್ ಹಾಗೂ ಪಾಲಿಕೆಯ ಸದಸ್ಯರು ಹಾಗೂ ಸ್ಥಾಯಿ ಸಮಿತಿ ಸೇರಿದಂತೆ ಯಾವುದೇ ಆಡಳಿತಾತ್ಮಕ ಬೆಳವಣಿಗೆಯೂ ಇಲ್ಲ. ಬಿಬಿಎಂಪಿಯಲ್ಲಿ ಸರ್ಕಾರಿ ಆಡಳಿತ ಇದೆ. ಇದರಿಂದ ಸ್ಥಳೀಯ ಮಟ್ಟದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ರಸ್ತೆಗುಂಡಿ, ಸ್ವಚ್ಛತೆ ಕೊರತೆ ಹಾಗೂ ಕಸದ ಸಮಸ್ಯೆ ಹೆಚ್ಚಳವಾಗಿದೆ.
ಪವರ್ ಕಟ್; ನಾಳೆ ವಿಜಯನಗರ, ಹೊಸಹಳ್ಳಿ, ಮಾಗಡಿ ರಸ್ತೆ ಹಲವೆಡೆ ಕರೆಂಟ್ ಇರಲ್ಲ, ಇಲ್ಲಿದೆ ಪೂರ್ಣ ಮಾಹಿತಿ


