BBMP
Loading ...

Cong MLA

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 6 ಕೇಸ್‌ಗಳಲ್ಲೂ ಸಹ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ದೋಷಿ ಎಂದು ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಅಲ್ಲದೇ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿ , ಶಿಕ್ಷೆ ಪ್ರಮಾಣವನ್ನೂ ಇಂದಿಗೆ ಕಾಯ್ದಿರಿಸಲಾಗಿತ್ತು.

ಇದೀಗ ಜೈಲು ಶಿಕ್ಷೆ ಪ್ರಕಟಿಸಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಹಾಗೂ ಅರಣ್ಯಾಧಿಕಾರಿ ಆಗಿದ್ದ ಮಹೇಶ್ ಬಿಳೆಯ ಅವರಿಗೆ ಮೊದಲ ಮತ್ತು 2ನೇ ಪ್ರಕರಣಗಳಲ್ಲಿ ತಲಾ 7 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ, ಪ್ರತಿವಾದ ಆಲಿಸಿ ಅ.24ರಂದು ಅಂತಿಮ ಆದೇಶವನ್ನು ಹೊರಡಿಸಿದ್ದರು.

ಈ ವೇಳೆ ಒಟ್ಟು 6 ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ ಅಪರಾಧಿ ಎಂದು ಆದೇಶ ಹೊರಡಿಸಲಾಗಿತ್ತು. ಇದೀಗ ಶಿಕ್ಷೆ ವಿಧಿಸಲಾಗಿದೆ. ಮೊದಲ ಕೇಸಿನಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅರಣ್ಯಾಧಿಕಾರಿ ಆಗಿದ್ದ ಮಹೇಶ್ ಬಿಳೆಯ ಅವರಿಗೆ ತಲಾ 7 ವರ್ಷ ಶಿಕ್ಷೆ ಹಾಗೂ ಎಲ್ಲಾ ಆರೋಪಿಗಳಿಗೂ ಸೇರಿ 9.60 ಕೋಟಿ ರೂ. ದಂಡ ವಿಧಿಸಿದೆ.

ಇನ್ನು ಬೆೇಲೇಕೇರಿ ಅದಿರು ನಾಪತ್ತೆಯ 2ನೇ ಪ್ರಕರಣದಲ್ಲಿಯೂ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ಹಾಗೂ ಎಲ್ಲಾ ಆರೋಪಿಗಳಿಗೂ ಸೇರಿ 6 ಕೋಟಿ ರೂ. ಡಂಡವನ್ನು ವಿಧಿಸಲಾಗಿದೆ. ಇನ್ನು 3ನೇ ಪ್ರಕರಣದಲ್ಲಿಯೂ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲ ಆರೋಪಿಗಳಿಗೂ ತಲಾ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ಸೇರಿ 9.36 ಕೋಟಿ ರೂ. ದಂಡ ವಿಧಿಸಲಾಗಿದೆ. 4ನೇ ಪ್ರಕರಣದಲ್ಲಿಯೂ ಸತೀಶ್ ಸೈಲ್ ಸೇರಿ ಎಲ್ಲ ಆರೋಪಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ಸೇರಿ 9.52 ಕೋಟಿ ರೂ. ದಂಡ ವಿಧಿಸಲಾಗಿದೆ. ಇನ್ನು ದಂಡ ಪಾವತಿ ಮಾಡಲಾಗದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲು ಆದೇಶ ಹೊರಡಿಸಲಾಗಿದೆ.

ಮುಂದುವರೆದು 5ನೇ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ 120(B) ಅಡಿ ತಲಾ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ, 9.25 ಕೋಟಿ ರೂ. ದಂಡ ವಿಧಿಸಲಾಗಿದೆ. 6ನೇ ಪ್ರಕರಣದಲ್ಲಿಯೂ ಸತೀಶ್ ಸೈಲ್ ಸೇರಿದಂತೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಇದರಲ್ಲಿ 90 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ದಂಡ ಪಾವತಿಸದೇ ಇದ್ದಲ್ಲಿ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಸ್ತರಣೆ ಮಾಡಲಾಗುತ್ತದೆ. ಒಟ್ಟಾರೆಯಾಗಿ ಬೇಲೇಕೇರಿ ಅದಿರು ನಾಪತ್ತೆ ಮಾಡಿದ 6 ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳಿಗೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಶಾಸಕ ಸ್ಥಾನ ಅನರ್ಹ
ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಇದೀಗ ಸೈಲ್​ಗೆ 7 ವರ್ಷದಷ್ಟು ಜೈಲು ಶಿಕ್ಷ ಆಗಿದೆ. ಹೀಗಾಗಿ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ. ಒಂದು ವೇಳೆ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿ ಅಲ್ಲಿ ಶಿಕ್ಷೆಗೆ ತಡೆ ಸಿಕ್ಕರೆ ಅನರ್ಹತೆಯಿಂದ ಬಚಾವಾಗಬಹುದು.

ಕುಳಿತಲ್ಲೇ ಮೊಬೈಲ್‌ ಮೂಲಕ ಟಿಕೆಟ್‌ ಬುಕ್‌ ಮಾಡಿ: ಆರಾಮಾಗಿ ಹಾಸನಾಂಬ ದೇವಿಯ ದರ್ಶನ ಪಡೆಯಿರಿ!

Leave a Reply

Your email address will not be published. Required fields are marked *