BBMP
Loading ...

ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಚಿವ ಜಮೀರ್ ಅಹ್ಮದ್ ಅವರು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಟೀಕಿಸಿದ್ದಾರೆ. ಕರಿಯ ಕುಮಾರಸ್ವಾಮಿ ಎಂದು ವರ್ಣಭೇದ ಪ್ರದರ್ಶಿಸಿ ಅವಮಾನ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಕೀಲ ಮಹೇಶ್ ದೂರು ನೀಡಿದ್ದು, ಹೊಸಕೋಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಹಾವೇರಿಯಲ್ಲಿ ಲೋಕಾ ದಾಳಿ ವೇಳೆ 9 ಲಕ್ಷ ಹಣವನ್ನು ಗಂಟು ಕಟ್ಟಿ ಮನೆಯಿಂದ ಹೊರಗೆಸೆದ ಭ್ರಷ್ಟ ಅಧಿಕಾರಿ

Leave a Reply

Your email address will not be published. Required fields are marked *