BBMP
Loading ...

Siddaramaiah

ಬೆಂಗಳೂರು: ವಿವಿಧ ನಿಗಮ– ಮಂಡಳಿಗಳ ನಿರ್ದೇಶಕ, ಸದಸ್ಯ ಸ್ಥಾನಗಳಿಗೆ ಒಂದು ಸಾವಿರಕ್ಕೂ ಕಾಂಗ್ರೆಸ್‌ ಕಾರ್ಯಕರ್ತರನ್ನು ಶೀಘ್ರದಲ್ಲಿ ನೇಮಕ ಮಾಡಿಕೊಳ್ಳಲು ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದ ಆಯ್ಕೆ ಸಮಿತಿ ನಿರ್ಧರಿಸಿದೆ.

ನಿಗಮ ಮಂಡಳಿ ನೇಮಕಾತಿ ಸಮಿತಿಯು ದಿನಾಂಕ 03-09-24 ರಂದು ಸಭೆ ನಡೆಸಿ, ನಿಗಮ ಮಂಡಳಿಗೆ ನಿರ್ದೇಶಕರ ಸ್ಥಾನಕ್ಕೆ ನೇಮಿಸಲು ಹೆಸರುಗಳನ್ನು ಶಿಫಾರಸ್ಸು ಮಾಡಲು ನೇಮಕಾತಿ ಸಮಿತಿಯ ಎಲ್ಲಾ ಸದಸ್ಯರುಗಳಿಗೆ ಜಿಲ್ಲೆಗಳ ಉಸ್ತುವಾರಿಯನ್ನು ನೀಡಲಾಗಿದೆ ಹಾಗೂ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಮುಖಂಡರುಗಳು ಶಿಫಾರಸ್ಸು ಮಾಡಬೇಕಾದ ಸದಸ್ಯರುಗಳ ಸಂಖ್ಯೆಯನ್ನು ನಿಗದಿಗೊಳಿಸಲಾಗಿದೆ. ಸಮಿತಿಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಸಂಬಂಧಪಟ್ಟ ಮುಖಂಡರುಗಳು ತಮ್ಮ ಶಿಫಾರಸ್ಸುಗಳನ್ನು ದಿನಾಂಕ 10-09-2024 ರ ಒಳಗಾಗಿ ಉಸ್ತುವಾರಿ ಸಮಿತಿಯ ಸದಸ್ಯರುಗಳಿಗೆ ಸಲ್ಲಿಸಲು ಕೋರಲಾಗಿದೆ.

ನಿಗಮ ಮಂಡಳಿ ನೇಮಕಾತಿ ಸದಸ್ಯರುಗಳಿಗೆ ಶಿಫಾರಸ್ಸುಗಳನ್ನು ಸಂಗ್ರಹಿಸಲು ಉಸ್ತುವಾರಿ ನೀಡಿರುವ ಜಿಲ್ಲೆಗಳ ಹೆಸರು

ರಾಜ್ಯದಲ್ಲಿರುವ 80ಕ್ಕೂ ಹೆಚ್ಚು ನಿಗಮ ಮಂಡಳಿಗಳಲ್ಲಿ 1,140 ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಲು ಉದ್ದೇಶಿಸಲಾಗಿದೆ. ಇದೇ 13ರ ಒಳಗೆ ಸಂಭವನೀಯರ ಪಟ್ಟಿ ಸಿದ್ಧಪ‍ಡಿಸಿ, ನೇಮಕ ಪ್ರಕ್ರಿಯೆ ನಡೆಸಲಾಗುವುದು’ ಎಂದು ಸಮಿತಿಯ ಸದಸ್ಯರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ತಿಳಿಸಿದರು.

ವಿವಿಧ ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ಗಳಿಗೆ ಸದಸ್ಯರ ನೇಮಕವೂ ಸೇರಿದಂತೆ ಇತ್ತೀಚೆಗೆ ನಡೆದ ಕೆಲವು ನೇಮಕಾತಿಗಳಿಗೆ ಕಾಂಗ್ರೆಸ್ ಪಕ್ಷದ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿಗಮ – ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗೆ ರಚಿಸಿದ ಸಮಿತಿಯ ಸಭೆ ವಿಧಾನಸೌಧದಲ್ಲಿ ಮಂಗಳವಾರ ನಡೆಯಿತು.

ಸಚಿವರಾದ ಸತೀಶ ಜಾರಕಿಹೊಳಿ, ಸಂತೋಷ್ ಲಾಡ್, ಜಿ.ಸಿ. ಚಂದ್ರಶೇಖರ್, ಶಾಸಕರಾದ ರಿಜ್ವಾನ್ ಹರ್ಷದ್, ರೂಪಕಲಾ ಶಶಿಧರ್, ಮುಖಂಡರಾದ ವಿ.ಆರ್. ಸುದರ್ಶನ್, ಎಂ.ಹರೀಶ್ ಕುಮಾರ್ ಸಭೆಯಲ್ಲಿದ್ದರು. ಆಯ್ಕೆ ಪ್ರಕ್ರಿಯೆಗೆ ನಿರ್ದಿಷ್ಟ ಮಾನದಂಡಗಳನ್ನು ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪಕ್ಷ ಸಂಘಟನೆಗೆ ಶ್ರಮಿಸಿದ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಈ ನಿಟ್ಟಿನಲ್ಲಿ ಜಿಲ್ಲಾ ಘಟಕಗಳ ಅಧ್ಯಕ್ಷರಿಂದಲೂ ಹೆಸರುಗಳನ್ನು ಪಡೆಯಬೇಕು. ಯುವ ಕಾಂಗ್ರೆಸ್, ಸಾಮಾಜಿಕ ಜಾಲತಾಣ, ಎನ್‌ಎಸ್‌ಯುಐ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳಲ್ಲಿ ಕಾರ್ಯನಿರ್ವಹಿಸಿದ ಅರ್ಹರನ್ನು ಗುರುತಿಸಬೇಕು. ರಾಜಕೀಯವಾಗಿ ಈವರೆಗೂ ಗುರುತಿಸಿಕೊಳ್ಳದ ತಳ ಸಮುದಾಯದವರಿಗೂ ನಿಗಮ– ಮಂಡಳಿಗಳಲ್ಲಿ ಅವಕಾಶ ನೀಡಬೇಕು ಎಂದು ಪರಮೇಶ್ವರ ಸೂಚಿಸಿದರು.

ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು, ಪಕ್ಷದ ಶಾಸಕರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳು, ಸಂಸದರು ಮಾಜಿ ಸಂಸದರು, ಪ್ರಮುಖರು ಸೇರಿ ಹೆಸರುಗಳನ್ನು ಶಿಫಾರಸು ಮಾಡಲು ಸೂಚಿಸಲಾಗಿದೆ. ಅಲ್ಲದೆ, ಆಯ್ಕೆ ಸಮಿತಿಯಲ್ಲಿರುವ ಸದಸ್ಯರಿಗೆ ಮೂರು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಯಾರಿಗೆ ಎಷ್ಟು ಸ್ಥಾನ? * ಪಕ್ಷದ ಮುಂಚೂಣಿ ಘಟಕಗಳಲ್ಲಿ ಇರುವವರಿಗೆ 10 ಸ್ಥಾನ * ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಬ್ಬರಂತೆ ಮಹಿಳೆಯರಿಗೆ ಅವಕಾಶ * ಈವರೆಗೂ ಅವಕಾಶ ಸಿಗದ ಸಣ್ಣ ಸಣ್ಣ ಸಮುದಾಯಕ್ಕೆ 275 ಸ್ಥಾನ

Leave a Reply

Your email address will not be published. Required fields are marked *