BBMP
Loading ...

Drink and Drive

Greater Bengaluru News9 : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸರು ಡ್ರಂಕ್ & ಡ್ರೈವ್ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ.

ತಡರಾತ್ರಿ ನಗರದ 140ಕ್ಕೂ ಹೆಚ್ಚು ಪಾಯಿಂಟ್‌ಗಳಲ್ಲಿ ನಡೆಸಿದ ತಪಾಸಣೆಯಲ್ಲಿ 500ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು 1500ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿವೆ. ಕುಡಿದು ವಾಹನ ಚಲಾಯಿಸುತ್ತಿದ್ದ ಚಾಲಕರಿಗೆ ದಂಡದ ರಶೀದಿ ನೀಡಿ ಹಣ ಪಾವತಿಸಲು ಸೂಚಿಸಲಾಗಿದೆ.

ತಪಾಸಣೆ ವೇಳೆ ಸೀಬರ್ಡ್ ಬಸ್ ಚಾಲಕನೂ ಸಿಕ್ಕಿಬಿದ್ದಿದ್ದು, ಕೆಲ ದಿನಗಳ ಹಿಂದಷ್ಟೇ ಸೀಬಸ್ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದ ಹಿನ್ನೆಲೆ ಆತಂಕ ಹೆಚ್ಚಿಸಿದೆ. ಇತ್ತ ದೆಹಲಿಯಲ್ಲೂ ಪೊಲೀಸರು ‘ಆಪರೇಷನ್ ಆಘಾಟ್ 3.0’ ಅಡಿಯಲ್ಲಿ ಭಾರೀ ಕಾರ್ಯಾಚರಣೆ ನಡೆಸಿ 660ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ನಗದು, ಮದ್ಯ, ಮಾದಕ ವಸ್ತುಗಳು ಹಾಗೂ ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *