ಬೆಂಗಳೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಧ್ಯಕ್ಷರಾದ ಸಿ. ರಮೇಶ್ ಅವರ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ N9 ಉಪ ಸಮಿತಿ ಮೊದಲೇ ಬಹುಮಾನ ಜಯಿಸಿತು.
ಮೊದಲ ಬಹುಮಾನ ಗೆದ್ದ ತಂಡಕ್ಕೆ 1,11,111 ರೂಪಾಯಿಯನ್ನು ಬಹುಮಾನವಾಗಿ ನೀಡಲಾಯಿತು. ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸಿ. ರಮೇಶ್ ಅವರು ವಿಜೇತ ತಂಡಕ್ಕೆ ಬಹುಮಾನವನ್ನು ವಿತರಣೆ ಮಾಡಿದರು.
ಬೆಂಗಳೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಧ್ಯಕ್ಷರಾದ ಸಿ. ರಮೇಶ್ ಅವರ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ N9 ಉಪ ಸಮಿತಿ ಮೊದಲೇ ಬಹುಮಾನ ಜಯಿಸಿತು. pic.twitter.com/m9shiNL183
— BBMPNEWS9 (@bbmp_news) July 13, 2024
ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಅಣ್ಣಮ್ಮ ದೇವಿ ವಿಗ್ರಹ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜುಲೈ 12ರ ಶುಕ್ರವಾರ ಸಂಜೆ 6 ಗಂಟೆಗೆ ನಗರ ದೇವತೆ ಶ್ರೀ ಅಣ್ಣಮ್ಮ ದೇವಿಯ ಪ್ರತಿಷ್ಠಾಪನೆ ಮತ್ತು ಪ್ರಸಾದ ವಿತರಣೆ ಮಾಡಲಾಯಿತು.
ಜುಲೈ 13 ರಂದು ಬೆಳಗ್ಗೆ 10-00 ಗಂಟೆಗೆ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ವಿದ್ಯುತ್ ಸಾಮಗ್ರಿಗಳ ವಸ್ತು ಪ್ರದರ್ಶನ ಕಾರ್ಯಕ್ರಮಗಳು. ಮಧ್ಯಾಹ್ನ 2-00 ಗಂಟೆಗೆ ಮಹಿಳಾ ವಿದ್ಯುತ್ ಗುತ್ತಿಗೆದಾರರಿಗೆ ಕ್ರೀಡಾಕೂಟ ಹಾಗೂ 2022-2023, 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಮತ್ತು ವಿಶೇಷ ಪ್ರತಿಭಾನ್ವಿತ ವಿದ್ಯುತ್ ಗುತ್ತಿಗೆದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ / ಪ್ರಶಸ್ತಿ ವಿತರಣೆ ಮತ್ತು ಹಿರಿಯ ವಿದ್ಯುತ್ ಗುತ್ತಿಗೆದಾರರಿಗೆ ಸನ್ಮಾನ ಮಾಡಲಾಯಿತು.

ಸಂಜೆ 5-00 ಗಂಟೆಯಿಂದ ರಾತ್ರಿ 10-00 ಗಂಟೆವರೆಗೆ ಖ್ಯಾತ ಚಲನಚಿತ್ರ ಹಿನ್ನಲೆ ಗಾಯಕರಾದ ಹೇಮಂತ್, ನಂದಿತ, ಕಂಬದ ರಂಗಯ್ಯ ಹಾಗೂ ಸುಬ್ರಮಣಿ ಸರಿಗಮಪ ತಂಡದವರಿಂದ ಸಂಗೀತ ರಸ ಸಂಜೆ, ನಗೆ, ಮಿಮಿಕ್ರಿ ಗೋಪಿ ಇನ್ನಿತರೆ ಮನರಂಜನೆ ಕಾರ್ಯಕ್ರಮಗಳು ನಡೆಯುತ್ತಿವೆ.
ಜುಲೈ 14ರ ಭಾನುವಾರ ಮಧ್ಯಾಹ್ನ 12-00 ಗಂಟೆಗೆ ಅನ್ನ ಸಂತರ್ಪಣೆ ನಂತರ 4-00 ಗಂಟೆಗೆ ನಗರ ದೇವತೆ ಶ್ರೀ ಅಣ್ಣಮ್ಮ ದೇವಿಯ ಪೂಜೆ ಮೆರವಣಿಗೆ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಬೆಂಗಳೂರು ನಗರ ಜಿಲ್ಲಾ ಸಮಿತಿ ಅಧ್ಯಕ್ಷರಾದ ಮಾನ್ಯ ಶ್ರೀ ಎಂ.ಗೋವಿಂದರಾಜು ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ಇಂಧನ ಸಚಿವರಾದ ಸನ್ಮಾನ್ಯ ಶ್ರೀ ಕೆ.ಜೆ.ಜಾರ್ಜ್, ಶಾಸಕರಾದ ಎಂ.ಕೃಷ್ಣಪ್ಪ, ಶ್ರೀ ರಿಜ್ವಾನ್ ಅರ್ಷದ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕರಾಅಪವಿಗು ಸಂಘ (ರಿ)ದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಸಿ.ರಮೇಶ್, ಕರಾಅಪವಿಗು ಸಂಘ (ರಿ)ದ ಗೌರವ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಾನ್ಯ ಶ್ರೀ ಹೆಚ್.ವಿ.ಚಂದ್ರಬಾಬು ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ವಿದ್ಯುತ್ ಗುತ್ತಿಗೆದಾರರ ಸಂಘದ ಹೋರಾಟ ಸಮಿತಿ ಚೇರ್ಮನ್ ವೈಎಚ್ ಆನಂದ್ ಭಾಗಹಿಸಿದ್ದರು.
ಬೆಂಗಳೂರಲ್ಲಿ ಹೆಚ್ಚಿದ ಫ್ಲೆಕ್ಸ್, ಬ್ಯಾನರ್ ಹಾವಳಿ: ಬಿಬಿಎಂಪಿ ಅಧಿಕಾರಿಗಳಿಗೆ ಹೈಕೋರ್ಟ್ ತರಾಟೆ


