BBMP
Loading ...

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ತಿಳಿಸಿದರು.

ಇದೀಗ 43 ಇನ್ಸ್ಟಾ ಅಕೌಂಟ್ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟಿ ರಮ್ಯಾ ಬಳಿ ಸೈಬರ್ ಕ್ರೈಂ ಪೊಲೀಸರು ಅಶ್ಲೀಲ ಮೆಸೇಜ್ ಅಕೌಂಟ್ ಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಯಾವ ಪೇಜ್ ಗಳಿಂದ ಅಶ್ಲೀಲ ಮೆಸೇಜ್ ಗಳು ಬಂದಿದ್ದವು? ಯಾವ ನಂಬರ್ ಗಳಿಂದ ಬೆದರಿಕೆ ಕರೆ ಬಂದಿತ್ತು? ಯಾವ ಅಕೌಂಟ್ ಗಳಿಂದ ಅಶ್ಲೀಲ ಮೆಸೇಜುಗಳು ಬಂದಿದ್ದವು? ಎಂದು ಎಲ್ಲದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ನಾವು ಈ ಒಂದು ದೂರನ್ನು ಸಿಸಿಬಿಗೆ ಕೊಟ್ಟಿದ್ದೇವೆ ಅವರು ಕ್ರಮ ಕೈಗೊಳ್ಳುತ್ತಾರೆ. ನಮ್ಮ ಸಿಸಿಬಿ ಸೈಬರ್ ಠಾಣೆಗೆ ನಟಿ ರಮ್ಯಾ ದೂರು ಕೊಟ್ಟಿದ್ದೇವೆ. ಅಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ. ದೂರಿನ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಾರೆ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದರ ಬಗ್ಗೆ ಸಿಸಿಬಿ ಜಾಯಿಂಟ್ ಕಮಿಷನರ್ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರಲ್ಲಿ 5 ಪಾಲಿಕೆ ರಚನೆ: ನವೆಂಬರ್ 1 ರಂದು ಅಂತಿಮ ಅಧಿಸೂಚನೆ: ಡಿಕೆ.ಶಿವಕುಮಾರ್

Leave a Reply

Your email address will not be published. Required fields are marked *