ಬೆಂಗಳೂರು : ಇಂದು ಬೆಂಗಳೂರಿನ ನೂತನ ಹೆಬ್ಬಾಳ್ ಫ್ಲೈಓವರ್ ಉದ್ಘಾಟಿಸಲಾಗಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರೋಡ್ಕಿಂಗ್ ಬೈಕ್ ಸವಾರಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆಶಿ, ಹೆಬ್ಬಾಳ ಮೇಲ್ಸೇತುವೆಯಲ್ಲಿ ಯೆಜ್ಡಿ ರೋಡ್ಕಿಂಗ್ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ.
#WATCH | Karnataka CM Siddaramaiah flags off as Deputy CM DK Shivakumar rides a motorcycle on the newly inaugurated Hebbal flyover in Bengaluru.
— ANI (@ANI) August 18, 2025
(Source: DK Shivakumar's Office) pic.twitter.com/OYtrQcJc8G
ಹೆಬ್ಬಾಳ ಜಂಕ್ಷನ್ನಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇಕಡಾ 30ರಷ್ಟು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.


