ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಫೆಸಿಲಿಟಿ ಆಸ್ಪತ್ರೆಯಲ್ಲಿ ಆಶಾಕಿರಣ ದೃಷ್ಟಿ ಕೇಂದ್ರವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಡಿಸಿಎಂ ಡಿಕೆಶಿ, ಗೋವಿಂದರಾಜನಗರದ ಪರಮಪೂಜ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಂಡು, ಕಾರ್ಯಕ್ರಮ ಉದ್ಘಾಟಿಸಿ, ಕನ್ನಡಕ ಪಡೆದು ದೃಷ್ಟಿದೋಷ ಇರುವ ಇತರರಿಗೂ ಉಚಿತ ಕನ್ನಡಕ ವಿತರಿಸಿದೆ. ಇಂದಿನಿಂದ ರಾಜ್ಯದ 393 ಕಡೆಗಳಲ್ಲಿ ಈ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು, ಪರಿಣಾಮಕಾರಿಯಾಗಿ ಕಣ್ಣಿನ ಆರೋಗ್ಯ ಸೇವೆ ಒದಗಿಸಲಿವೆ ಎಂದಿದ್ದಾರೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಫೆಸಿಲಿಟಿ ಆಸ್ಪತ್ರೆಯಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನಾ ಸಮಾರಂಭಕ್ಕೆ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಮತ್ತು ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಲಾಯಿತು ಎಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾಕೃಷ್ಣ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಬರೆದುಕೊಂಡಿದ್ದಾರೆ.
ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ: ತಂದೆಗೆ 30,000 ರೂ. ದಂಡ, 1 ದಿನ ಜೈಲು ಶಿಕ್ಷೆ!


