BBMP
Loading ...

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಶಾಸಕ ಹಾಗೂ ವಾಲ್ಮಿಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​ ನಿವಾಸದ ಮೇಲೆ ಇಂದು (ಜುಲೈ 10) ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಸಂಜಯ್ ನಗರದಲ್ಲಿರುವ ಮತ್ತು ಬಳ್ಳಾರಿಯ ನೆಹರು ನಗರದಲ್ಲಿರುವ ನಾಗೇಂದ್ರ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಎಂಟು ಅಧಿಕಾರಿಗಳ ತಂಡ ದಾಳಿ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಇದಲ್ಲದೆ, ಬೆಂಗಳೂರಿನಲ್ಲಿರುವ ಶಾಸಕ ಬಸವನಗೌಡ ದದ್ದಲ್‌ ಅವರ ನಿವಾಸದ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿ ಶಾಸಕ ಬಸನಗೌಡ ದದ್ದಲ ಅವರ ನಿವಾಸವಿದೆ. ಇಡಿ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ಮಾಹಿತಿ ಪ್ರಕಾರ ಬೆಂಗಳೂರು, ಬಳ್ಳಾರಿ, ರಾಯಚೂರು ಮತ್ತು ಹೈದರಾಬಾದ್​ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಏಕಕಾಲಯದಲ್ಲಿ ದಾಳಿ ಮಾಡಿದೆ. ಬೆಂಗಳೂರಿನ 3 ಕಡೆಯಲ್ಲಿ ದಾಳಿ ಮಾಡಲಾಗಿದೆ. ಯಲಹಂಕ, ಡಾಲರ್ಸ್​ ಕಾಲನಿ ಮತ್ತು ವಸಂತ ನಗರದಲ್ಲಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿ, ಕಡತಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಅವರ ಕೈವಾಡ ಇದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದರು.

ಇನ್ನು ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ವಹಿಸಿದೆ. ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಬಸವನಗೌಡ ದದ್ದಲ್‌ ಮಂಗಳವಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಎದುರು ಹಾಜರಾಗಿ ವಿಚಾರಣೆ ಎದುರಿಸಿದ್ದರು.

ಜುಲೈ 12ರಂದು ವಿಜಯನಗರ, ಗೋವಿಂದರಾಜನಗರ ಸೇರಿ ಹಲವೆಡೆ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯ

Leave a Reply

Your email address will not be published. Required fields are marked *