BBMP
Loading ...

BBMP Election

ಬೆಂಗಳೂರು : ಬಿಬಿಎಂಪಿ ಸೇರಿದಂತೆ ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳು ಮುಂದಕ್ಕೆ ಹೋಗುವ ಸಾಧ್ಯತೆ ಇದ್ದು, ಡಿಸೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವುದು ಅನುಮಾನ. ಚುನಾವಣೆಗಳೇನಿದ್ದರೂ ಮೇ ಬಳಿಕ ನಡೆಯುವ ಸಾಧ್ಯತೆಗಳು ಹೆಚ್ಚಿವೆ.

ಬಿಬಿಎಂಪಿ, ಜಿ.ಪಂ. ಹಾಗೂ ತಾ.ಪಂ. ಚುನಾವಣೆಗಳನ್ನು ಡಿಸೆಂಬರ್ ಅಂತ್ಯದೊಳಗೆ ನಡೆಸಲೇಬೇಕಿದ್ದರೂ ಕೆಲವು ತಾಂತ್ರಿಕ ಕಾರಣಗಳಿಂದ ಡಿಸೆಂಬರ್ ಒಳಗೆ ಚುನಾವಣೆ ನಡೆಯುವುದು ಅನುಮಾನ ಎಂದು ಹೇಳಲಾಗಿದೆ. ಹಾಗಾಗಿ ಬಿಬಿಎಂಪಿ, ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಸ್ಪರ್ಧೆಗೆ ಅಣಿಯಾಗಿದ್ದವರಿಗೆ ನಿರಾಸೆ ಮೂಡಿದೆ.

ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮೇ ನಂತರ ನಡೆಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿದ್ದು, ಸದ್ಯ ಡಿಸೆಂಬರ್ ಒಳಗೆ ಚುನಾವಣೆ ನಡೆಯುವುದು ಕಷ್ಟ ಎಂದು ಹೇಳಲಾಗಿದೆ.

ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಕೆಲವು ತಾಂತ್ರಿಕ ಕಾರಣಗಳಿಂದ ಡಿಸೆಂಬರ್ ಒಳಗೆ ಚುನಾವಣೆ ನಡೆಸುವುದು ಕಷ್ಟ ಎಂದು ಹೇಳಲಾಗುತ್ತಿದ್ದು, ಎಲ್ಲವನ್ನು ಸರಿಪಡಿಸಿಕೊಂಡು ಮೇ ಬಳಿಕ ಚುನಾವಣೆ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಬಿಎಂ, ಜಿ.ಪಂ. ಹಾಗೂ ತಾ.ಪಂ. ಚುನಾವಣೆಗಳನ್ನು ನಡೆಸುವುದು ಬೇಡ. ಚುನಾವಣೆಗಳನ್ನು ಮುಂದೂಡಿ ಎಂದು ಆಡಳಿತ ಪಕ್ಷದ ಶಾಸಕರುಗಳು ಸರ್ಕಾರದ ಮೇಲೆ ಒತ್ತಡ ಹೇರಿರುವುದರಿಂದ ಡಿಸೆಂಬರ್ ಒಳಗೆ ಈ ಚುನಾವಣೆಗಳು ನಡೆಯುವುದು ಬಹುತೇಕ ಕಷ್ಟ. ಮೇ ಬಳಿಕವೇ ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ ಎಂದು ಹೇಳಲಾಗಿದೆ.

ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ ಅಂತ್ಯದಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ಎಲ್ಲ ಸಿದ್ದತೆಗಳನ್ನು ನಡೆಸಿತ್ತು. ಕ್ಷೇತ್ರ ಪುನರ್ ವಿಂಗಡಣೆ ಸಂಬಂಧ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಚುನಾವಣೆ ಸಂಬಂಧ ಕೆಲವರು ನ್ಯಾಯಾಲಯಕ್ಕೂ ಮೊರೆ ಹೋಗಿದ್ದರು. ಚುನಾವಣೆಗೆ ಇರುವ ಎಲ್ಲ ಅಡ್ಡಿ ಆತಂಕಗಳನ್ನು ನಿವಾರಣೆ ಮಾಡಿಕೊಂಡು ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಲು ಆಯೋಗ ತಯಾರಿ ನಡೆಸಿತ್ತು. ಆದರೆ ಈಗಿನ ಪರಿಸ್ಥಿತಿಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸುವುದು ಕಷ್ಟ ಎಂದು ಹೇಳಲಾಗುತ್ತಿದ್ದು, ಮೇ ಬಳಿಕವೇ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

ಬಿಬಿಎಂಪಿ ಚುನಾವಣೆ: ಶಾಸಕರ ವಿರೋಧ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಅಷ್ಟೇ ಅಲ್ಲ ಬಿಜೆಪಿ-ಜೆಡಿಎಸ್‌ನ ಕೆಲ ಶಾಸಕರು ಚುನಾವಣೆ ಮುಂದೂಡುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ಮುಗಿದ ಒಂದು ವರ್ಷವಷ್ಟೇ ಆಗಿದೆ. ನಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ಜಾರಿಯಾಗಿಲ್ಲ. ಹಾಗಾಗಿ ತಕ್ಷಣ ಬಿಬಿಎಂಪಿ ಚುನಾವಣೆ ಬೇಡ. ಮೇ ಬಳಿಕ ಚುನಾವಣೆಗಳನ್ನು ನಡೆಸಲಿ ಎಂದು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಡಿ.ಕೆ.ಶಿವಕುಮಾರ್ ರವರಿಗೆ ಗುಟ್ಟಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಇರುವ ಅಡ್ಡಿ ಆತಂಕಗಳನ್ನು ನಿವಾರಣೆ ಮಾಡಿಕೊಂಡು ಮೇ ಬಳಿಕವೇ ಚುನಾವಣೆ ನಡೆಸುವ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಉನ್ನತ ಮೂಲಗಳು ಹೇಳಿವೆ.

Leave a Reply

Your email address will not be published. Required fields are marked *