ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಜೂನ್ 4ರಂದು ಇಂಧನ ಸಚಿವರಾದ ಶ್ರೀ ಕೆ. ಜೆ.ಜಾರ್ಜ್ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಜೂನ್ 04ರ ಬುಧವಾರದಂದು ಬೆಳಗ್ಗೆ 11ಕ್ಕೆ ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ರಮೇಶ್ ಅವರ ಮುಂದಾಳತ್ವದಲ್ಲಿ ಇಂಧನ ಸಚಿವರಾದ ಶ್ರೀ ಕೆ. ಜೆ.ಜಾರ್ಜ್ ಅವರನ್ನು ಸನ್ಮಾನಿಸಿ, ನಮ್ಮ ಮುಖ್ಯ ಸಮಸ್ಯೆಯಾದ OC/CC ಬಗ್ಗೆ ಮಾತನಾಡಲಾಗುವುದು ಎಂದು ಸಮಿತಿ ತಿಳಿಸಿದೆ.
ಈ ವೇಳೆ ಜಿಲ್ಲಾಧ್ಯಕ್ಷರಾದ ಶ್ರೀರಾಘವೇಂದ್ರ ಅವರು ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಮಿತಿಯ ಎಲ್ಲಾ ಸದಸ್ಯರು ಕಾರ್ಯಕ್ರಮಕ್ಕೆ ಬರಬೇಕೆಂದು ಮೈಸೂರು ಜಿಲ್ಲಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಕುಮಾರ್ ಮನವಿ ಮಾಡಿದ್ದಾರೆ.
ಆರ್ಸಿಬಿ ಗೆದ್ರೆ ಜೂ.4 ರಂದು ಸಂಜೆ 5 ಗಂಟೆಯಿಂದ ಉಚಿತ ಚಾಟ್ಸ್: ಮಹಾಲಕ್ಷ್ಮಿ ಲೇಔಟ್ RCB ಅಭಿಮಾನಿಯಿಂದ ಫ್ರೀ ಆಫರ್


