BBMP
Loading ...

BBMP

Greater Bengaluru News9 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲಾಗಿ ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆದರೂ, ನಗರದ ಹಲವು ಭಾಗಗಳಲ್ಲಿ ಇನ್ನೂ ಹಳೆಯ ಬಿಬಿಎಂಪಿ ನಾಮಫಲಕಗಳೇ ಕಾಣಿಸುತ್ತಿವೆ.

ಜಿಬಿಎ ಅಡಿಯಲ್ಲಿ ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ಎಂಬ ಐದು ಹೊಸ ನಗರಪಾಲಿಕೆಗಳನ್ನು ರಚಿಸಲಾಗಿದೆ. ಆದರೆ ಆಡಳಿತ ವ್ಯವಸ್ಥೆಯ ಬದಲಾವಣೆಗೆ ಅನುಗುಣವಾಗಿ ನಾಮಫಲಕಗಳನ್ನು ಬದಲಿಸುವ ಕಾರ್ಯದಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಳೆಯ ಬೋರ್ಡ್‌ಗಳು ಹಾಗೆಯೇ ಉಳಿದಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ತಮ್ಮ ವಾರ್ಡ್ ಯಾವ ನಗರಪಾಲಿಕೆ ವ್ಯಾಪ್ತಿಗೆ ಸೇರಿದೆ, ವಾರ್ಡ್ ಸಂಖ್ಯೆ ಬದಲಾಗಿದೆಯೇ ಅಥವಾ ಇಲ್ಲವೇ ಎಂಬ ಮಾಹಿತಿ ಪಡೆಯಲು ನಾಗರಿಕರು ಪರದಾಡುವಂತಾಗಿದೆ.

ನಗರದ ಸಮಸ್ಯೆಗಳ ಕುರಿತು ದೂರು ನೀಡಬೇಕಾದರೆ ಯಾವ ಕಚೇರಿಯನ್ನು ಸಂಪರ್ಕಿಸಬೇಕು ಎಂಬುದರ ಬಗ್ಗೆಯೂ ಜನರಿಗೆ ಸ್ಪಷ್ಟತೆ ಇಲ್ಲ. ಆಡಳಿತ ಬದಲಾವಣೆಯ ಮಾಹಿತಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *