BBMP
Loading ...

Bribe

ಬೆಂಗಳೂರು: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಲಂಚಕ್ಕೆ ಬೇಡಿಕೆ ಇಟ್ಟ ಮಹಿಳಾ ಪಿ.ಎಸ್.ಐ ಲೋಕಾ ಬಲೆಗೆ ಬಿದ್ದಿರುವ ಘಟನೆ ಜರುಗಿದೆ.

ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಗೋವಿಂದಪುರ ಠಾಣೆ ಮಹಿಳಾ ಪಿ.ಎಸ್.ಐ. ಇವರು ಕೇಸ್ ಒಂದಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಲಂಚಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಈ ಬಗ್ಗೆ ಮಹಮ್ಮದ್ ಯೂನಸ್ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ದಾಳಿ ನಡೆಸಿದಾಗ, ಒಂದು ಲಕ್ಷ 25 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಪಿ ಎಸ್ ಐ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿದ್ದಾರೆ.

ಸದ್ಯ ಮಹಿಳಾ ಪಿ.ಎಸ್.ಐ ರನ್ನ ವಶಕ್ಕೆ ಪಡೆದಿರೋ ಲೋಕಾಯುಕ್ತ, ತನಿಖೆ ಕೈಗೊಂಡಿದೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಈ ಟ್ರಾಪ್ ಕಾರ್ಯಾಚರಣೆ ನಡೆದಿದೆ.

ಡಿಸಿಎಂ ಡಿಕೆ ಶಿವಕುಮಾರ್‌ಗೆ ಅನಾರೋಗ್ಯ: 3 ದಿನ ಸಾರ್ವಜನಿಕರ ಭೇಟಿ ಇಲ್ಲ

Leave a Reply

Your email address will not be published. Required fields are marked *