ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋಟಿ ರು. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈ ಕೋರ್ಟ್ ಎತ್ತಿಹಿಡಿದಿತ್ತು.ಇದರ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಹ ಸಿಎಂ ವಿರುದ್ಧ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.
CRPcಸೆಕ್ಷನ್ 156( 3 )ಅಡಿ ತನಿಖೆಯಾಗಲಿದ್ದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಆಗಿದ್ದು ಮೈಸೂರು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ 156(3) ಅಡಿ ತನಿಖೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಬೇಕೆಂಬ ನಿಯಮವಿದೆ.
ಒಂದು ವೇಳೆ ಎಫ್ಐಆರ್ ದಾಖಲಾದರೆ ಸಿದ್ದರಾಮಯ್ಯ ಅವರ 40 ವರ್ಷದ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆ ಸಿಎಂ ಬಂಧನ ಸಾಧ್ಯತೆ ಪ್ರಕರಣದ ಸಂಪೂರ್ಣ ಅಧಿಕಾರ ಮೈಸೂರು ಲೋಕಾಯುಕ್ತದ ತನಿಖಾಧಿಕಾರಿಯ ಕೈಯಲ್ಲಿರುತ್ತದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯಾವುದೇ ನಿಮಿಷದಲ್ಲಿ ಬಂಧಿಸುವ ಅಧಿಕಾರ ತನಿಖಾಧಿಕಾರಿಗೆ ಇದೆ.ಅವಶ್ಯಕತೆಗೆ ಅನುಸಾರವಾಗಿ ತನಿಖಾಧಿಕಾರಿ ಅಧಿಕಾರ ಬಳಸಬಹುದಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಹೆಚ್ಚಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.
ಸಿಎಂ ಮೇಲೆ ಮತ್ತೊಂದು ತೂಗುಗತ್ತಿ: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ


