BBMP
Loading ...

Woman Death

ಬೆಂಗಳೂರು: ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳೆಲ್ಲಾ ನದಿಯಂತಾಗಿದೆ. ಬೆಳಗ್ಗೆಯೇ ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಇದೀಗ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ ಘಟನೆ ಮಹದೇವಪುರದ ಚನ್ನಸಂದ್ರದಲ್ಲಿ ನಡೆದಿದೆ.

ಶಶಿಕಲಾ (35) ಮೃತ ಮಹಿಳೆಯಾಗಿದ್ದು, ವೈಟ್ ಫೀಲ್ಡ್‌ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ದುರ್ಘಟನೆ ನಡೆದಿದೆ. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ. ಘಟನೆಯ ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ವೈಟ್‌ಫೀಲ್ಡ್ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಯಾದಗಿರಿಯ ಶಹಾಪುರ ಮೂಲದ ಶಶಿಕಲಾ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತ ಶಶಿಕಲಾಗೆ ಇಬ್ಬರು ಸಣ್ಣ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು, ಡಿಸಿಪಿ ಶಶಿಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಲ್ಲಿ ವರುಣನ ಅಬ್ಬರ: ಕಳೆದ 10 ವರ್ಷದಲ್ಲಿ ರಾಜಧಾನಿಯಲ್ಲಿ ಮೇ ತಿಂಗಳಲ್ಲಿ ದಾಖಲೆಯ ಮಳೆ

Leave a Reply

Your email address will not be published. Required fields are marked *