BBMP
Loading ...

BESCOM

Greater Bengaluru News9 : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡುವ ಕುರಿತು ಬೆಸ್ಕಾಂ ಅಧಿಕೃತ ಆದೇಶವನ್ನು ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024ರ ಕಲಂ 241(7)ರ ಅನ್ವಯ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ, 1200 ಚದರ ಅಡಿಗಳ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ, ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್​ (Stilt) + 3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy certificate) ಪಡೆಯುವುದರಿಂದ ವಿನಾಯಿತಿ ನೀಡಿ ಬೆಸ್ಕಾಂ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಬೆಸ್ಕಾಂ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಬಡವರು ಮತ್ತು ಮಧ್ಯಮ ವರ್ಗದವರು ಅನಧಿಕೃತವಾಗಿ ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿಂದೆ ಓಸಿ ಇಲ್ಲದ ಕಟ್ಟಡಗಳಿಗೆ ಜಲಮಂಡಳಿ, ಬೆಸ್ಕಾಂ ವಿದ್ಯುತ್ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಇದೀಗ 30×40 ನಿವೇಶನಗಳಿಗೆ ಓಸಿ ಅಗತ್ಯವಿಲ್ಲ. ಸಚಿವ ಸಂಪುಟ ಒಪ್ಪಿಗೆಯಂತೆ ಇದೀಗ ಒಸಿಯಿಂದ ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಇಂದು (ಅಕ್ಟೋಬರ್ 14) ಅಧಿಕೃತ ಅದೇಶ ಹೊರಡಿಸಿದೆ.

Leave a Reply

Your email address will not be published. Required fields are marked *