ಬೆಂಗಳೂರು: ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಮದ್ಧೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇಂದು ಪಾರ್ಥೀವ ಶರೀರವನ್ನು ಕೊಂಡೊಯ್ಯಲಿರುವಂತ ರೂಟ್ ಮ್ಯಾಪ್ ಈ ಕೆಳಗಿನಂತಿದೆ.
ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಒಕ್ಕಲಿಗರ ಸಂಪ್ರದಾಯದಂತೆ ನೆರವೇರಿಸಲಾಗುತ್ತದೆ ಎಂದರು.
ಇಂದು ಬೆಳಿಗ್ಗೆ 10.30ಕ್ಕೆ ಮದ್ಧೂರು ಪಟ್ಟಣವನ್ನು ಮಾಜಿ ಸಿಎಂ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ತಲುಪಲಿದೆ. ಟೌನ್ ಹಾಲ್ ನಿಂದ ಸಾಗಲಿರುವಂತ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವು, ಮೈಸೂರು ಬ್ಯಾಂಕ್ ಸರ್ಕಲ್, ಕೆ ಆರ್ ಆರ್ಚ್, ಕೆಂಗೇರಿ, ಬಿಡದಿ ಮೂಲಕ ಸಾಗಲಿದೆ.
ರಾಮನಗರ, ಚನ್ನಪಟ್ಟಣದಲ್ಲೂ ಅಭಿಮಾನಿಗಳು, ಹಿತೈಶಿಗಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30ಕ್ಕೆ ಮದ್ದೂರಿನ ಸೋಮನಹಳ್ಳಿಯನ್ನು ಪಾರ್ಥೀವ ಶರೀರ ತಲುಪಲಿದೆ.
ಬಿಗಿ ಪೊಲೀಸ್ ಬಂದೋಬಸ್ತ್
ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಕ್ಷಿಣ ವಲಯದ ಐಜಿಪಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ.
ಬಂದೋಬಸ್ತ್ ಗಾಗಿ ಅಂತ್ಯಕ್ರಿಯೆ ಸ್ಥಳದಲ್ಲಿ ಮಂಡ್ಯ ಜಿಲ್ಲೆಯ ಪೊಲೀಸರಲ್ಲದೇ ಹೊರ ಜಿಲ್ಲೆಗಳಿಂದಲೂ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್ ಪಿ, ಮೂವರು ಹೆಚ್ಚುವರಿ ಎಸ್ಪಿ ಹಾಗೂ 10 ಡಿವೈಎಸ್ಪಿಗಳನ್ನು ನಿಯೋಜಿಸಲಾಗಿದೆ.
ಇದಲ್ಲದೇ 70 ಪಿಎಸ್ಐ, 700 ಪೊಲೀಸ್ ಸಿಬ್ಬಂದಿ, 6 ಕೆಎಸ್ ಆರ್ ಪಿ, 6 ಡಿಎಎರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ದಕ್ಷಿಣ ವಲಯದ ಐಜಿಪಿ ಡಾ.ಬೋರಲಿಂಗಯ್ಯ ಅವರು ಅಂತ್ಯಕ್ರಿಯೆ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ಇಂದು ಮದ್ದೂರಲ್ಲಿ ಸ್ವಯಂ ಪ್ರೇರಿತ ಬಂದ್
ಇನ್ನೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಮದ್ದೂರು ಪಟ್ಟಣದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಮದ್ದೂರು ಬಂದ್ ಗೆ ವರ್ತಕರು, ಬೀದಿ ಬದಿಯ ವ್ಯಾಪಾರಿಗಳು, ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಸಂಘದಿಂದ ಬೆಂಬಲ ಸೂಚಿಸಲಾಗಿದೆ.
ಒಕ್ಕಲಿಗರ ಸಂಘ, ದಲಿತಪರ ಸಂಘಟನೆಗಳೂ ಇಂದಿನ ಮದ್ದೂರು ಬಂದ್ ಗೆ ಬೆಂಬಲ ಸೂಚಿಸಿವೆ. ಇಂದು ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗರ ಸಂಪ್ರದಾಯದಂತೆ ನೆರವೇರಿಸಲಾಗುತ್ತಿದೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ ನಂಜಾವಧೂತ ಶ್ರೀಗಳು


