BBMP
Loading ...

Muthappa Rai

ಬೆಂಗಳೂರು/ ಬಿಡದಿ:- ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ನಲ್ಲಿ ದುಷ್ಕರ್ಮಿಗಳು ಫೈರಿಂಗ್ ನಡೆಸಿರುವ ಘಟನೆ ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ಜರುಗಿದೆ.

ತಡರಾತ್ರಿ ೧೨.೫೦ ಸುಮಾರಿಗೆ ಈ ಘಟನೆ ಜರುಗಿದೆ. ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ ಮೂರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಗುಂಡಿನ ದಾಳಿಯ ವೇಳೆ ತಕ್ಷಣ ಮುಂದೆ ಬಗ್ಗಿದ್ದರಿಂದ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ. ಚಾಲಕ ರಾಜು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಿಡದಿ ಇನ್ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಎಸ್.ಪಿ ಶ್ರೀನಿವಾಸಗೌಡ ಹೇಳಿದ್ದೇನು?
ಘಟನೆ ಸಂಬಧ ಎಸ್ಪಿ ಶ್ರೀನಿವಾಸ್ ಗೌಡ ಮಾತನಾಡಿ, ಮಧ್ಯರಾತ್ರಿ ಮನೆಯಿಂದ ಹೊರ ಹೋಗುವ ಸಂದರ್ಭದಲ್ಲಿ ಘಟನೆ ಆಗಿದೆ. ಅವರ ಜೊತೆ ಟ್ರಾವೆಲ್ ಮಾಡ್ತಿದ್ದ ಒಬ್ಬರಿಗೆ ಸಣ್ಣ ಪುಟ್ಟ ಗಾಯ ಆಗಿದೆ. ರಿಕ್ಕಿ ರೈಗೆ ತೀವ್ರ ಗಾಯ ಆಗಿದೆ. ಇನ್ನು ಅವರನ್ನು ವಿಚಾರಿಸಿ ಮಾಹಿತಿ ಕಲೆ ಹಾಕಬೇಕಾಗಿದೆ. ಮೇಲ್ನೊಟಕ್ಕೆ ಒಂದು ಸುತ್ತು ಫೈರ್ ಆಗಿರುವ ಶಂಕೆ ಇದೆ. FSL ವರದಿ ಬಳಿಕ ಇನ್ನಷ್ಟು ಮಾಹಿತಿ ಗೊತ್ತಾಗುತ್ತೆ ಎಂದರು.

ಬೆಂಗಳೂರಿನ ರೆವೆನ್ಯೂ ಸ್ವತ್ತುದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ: ರೆವಿನ್ಯೂ ಸೈಟ್​ಗಳಿಗೂ ಸಿಗಲಿದೆ ನಕ್ಷೆ ಮಂಜೂರಾತಿ

Leave a Reply

Your email address will not be published. Required fields are marked *