BBMP
Loading ...

HD Devegowda

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಚೆನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಅವರ ಪತ್ನ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಿನ್ನೆ (ಬುಧವಾರ) ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು ಆದರೆ, ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆ ವಿಚಾರವಾಗಿ ನಿನ್ನೆ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ಕರೆದಿತ್ತು, ಬೆಂಗಳೂರಿನ ಖಾಸಿಗೆ ಹೋಟೆಲಲ್ಲಿ ಸಭೆ ನಡೆಬೇಕಿತ್ತು. ಆದರೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ನಿಂದಲೇ ಅಭ್ಯರ್ಥಿ ಘೋಷಣೆ ಮಾಡಿಸುತ್ತೇನೆ ಎಂದು ಹೆಚ್‌ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಒಂದು ಕಡೆ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆಂಬ ಗೊಂದಲದಲ್ಲಿ ಹೆಚ್‍ಡಿ ಕುಮಾರಸ್ವಾಮಿ ಇದ್ದರೆ, ಇನ್ನೊಂದು ಕಡೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿಗೆ ರಾಜೀನಾಮೆ ಕೊಟ್ಟು ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಯಾದ ಸಿ.ಪಿ. ಯೋಗೇಶ್ವರ್!​

Leave a Reply

Your email address will not be published. Required fields are marked *