BBMP
Loading ...

Jayalalitha

ಬೆಂಗಳೂರು: ಕರ್ನಾಟಕ ಸಿಬಿಐ ನ್ಯಾಯಾಲಯದ ವಶದಲ್ಲಿದ್ದ ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ. ಅಧಿಕಾರಿಗಳು ಪ್ರಸ್ತುತ ಅವುಗಳ ಮೌಲ್ಯವನ್ನು ಲೆಕ್ಕ ಹಾಕುವ ಪ್ರಕ್ರಿಯೆಯಲ್ಲಿದ್ದಾರೆ. ದಿವಂಗತ ಜಜಲಲಿತಾ. ಭ್ರಷ್ಟಾಚಾರ ಪ್ರಕರಣದಲ್ಲಿ ಅವರು ಜೈಲು ಪಾಲಾಗಿದ್ದರು ಎಂದು ತಿಳಿದುಬಂದಿದೆ. ಆದರೆ, ಆ ಸಮಯದಲ್ಲಿ ವಶಪಡಿಸಿಕೊಂಡ ಕೆಜಿಗಟ್ಟಲೆ ಚಿನ್ನ ಮತ್ತು ಬೆಳ್ಳಿ ವರ್ಷಗಳ ಕಾಲ ಕರ್ನಾಟಕ ಸಿಬಿಐ ನ್ಯಾಯಾಲಯದ ವಶದಲ್ಲಿತ್ತು. ಆದರೆ, ಈಗ ಚಿನ್ನವನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಿರುವುದರಿಂದ ಅವುಗಳ ಎಣಿಕೆ ಆರಂಭವಾಗಿದೆ.

ಸಂಬಂಧಿಕರು ಎಂದು ಹೇಳಿಕೊಂಡು ದೀಪ ಹಾಗೂ ದೀಪಕ್ ಇಬ್ಬರು ಜಯಲಲಿತಾ ಒಡವೆಯನ್ನ ನಮಗೆ ಕೊಡಿ ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿಯನ್ನ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ತಮಿಳುನಾಡು ಸರ್ಕಾರಕ್ಕೆ ಎಲ್ಲಾ ವಸ್ತುಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ವಕೀಲರು ಹಾಗೂ ತಮಿಳುನಾಡಿನ ಕೆಲವು ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಪ್ರತಿಯೊಂದು ಮಾಹಿತಿಯನ್ನು ನೀಡಿ ಚಿನ್ನದ ಒಡವೆಗಳನ್ನು ತೂಕವನ್ನು ಹಾಕುತ್ತಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರಕಾರದ ಸುಪರ್ದಿಗೆ ನೀಡುವಂತೆ ವಿಶೇಷ ನ್ಯಾಯಾಲಯವು ಆದೇಶಿಸಿತ್ತು.

7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 VCR, 1 ವಿಡಿಯೋ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್ ಹಾಗೂ 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್​ಗಳು ತಮಿಳುನಾಡು ಸರ್ಕಾರಕ್ಕೆ ಸೇರಲಿವೆ.

ವಿಶೇಷ ನ್ಯಾಯಾಲಯವು ಬೆಲೆ ಬಾಳುವ ವಸ್ತುಗಳು, ಚಿನ್ನ ಮತ್ತು ವಜ್ರಾಭರಣಗಳನ್ನು ಹಿಂದಿರುಗಿಸಲು 2024ರ ಫೆ.19ಕ್ಕೆ ದಿನಾಂಕ ನಿಗದಿಪಡಿಸಿತ್ತು. 2024ರ ಮಾರ್ಚ್ 6 ಮತ್ತು 7ರಂದು ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳನ್ನು ನಿಯೋಜಿಸುವಂತೆ ತಮಿಳುನಾಡು ಸರಕಾರಕ್ಕೆ ನಿರ್ದೇಶನ ನೀಡಿತ್ತು. ಈ ಮಧ್ಯೆ, ದೀಪಾ ಮತ್ತು ದೀಪಕ್‌ ಅವರು ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಆಸ್ತಿ ಮತ್ತು ಬೆಲೆ ಬಾಳುವ ವಸ್ತುಗಳ ಹಸ್ತಾಂತರ ಪ್ರಕ್ರಿಯೆಗೆ ಒಂದು ದಿನ ಮೊದಲು 2024ರ ಮಾರ್ಚ್ 5ರಂದು ಹೈಕೋರ್ಟ್‌ನ ಏಕ ಸದಸ್ಯ ಪೀಠ, ವಿಶೇಷ ನ್ಯಾಯಾಲಯದ ಆದೇಶವನ್ನು ತಡೆಹಿಡಿದಿತ್ತು. ಈಗ ಮೇಲ್ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಆಸ್ತಿ ಮತ್ತು ಆಭರಣಗಳನ್ನು ಹಸ್ತಾಂತರಿಸುತ್ತಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು, 2014ರ ಸೆ.27ರಂದು ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿತ್ತು.

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ ಹರಿದ ನೋಟುಗಳಿದ್ರೆ ಈ ರೀತಿ ಬದಲಾಯಿಸಿಕೊಳ್ಳಿ!

Leave a Reply

Your email address will not be published. Required fields are marked *