BBMP
Loading ...

Rapido

ಬೆಂಗಳೂರು:- ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಬ್ರೇಕ್ ಬಿದ್ದಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಳ್ಳಲಿದೆ.

ಟ್ರಾಫಿಕ್ ಕಡಿಮೆ, ಟ್ರಾವೆಲ್ ದರವೂ ಕಡಿಮೆ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಕ್ವಿಕ್ ಡ್ರಾಪ್ ಪಾಯಿಂಟ್. ಶರವೇಗದಲ್ಲಿ ಜನರಿಗೆ ಬೇಕಾದ ಜಾಗ ತಲುಪಿಸುವ ಕೆಲಸ ಮಾಡುತ್ತಿದ್ದದ್ದು, ಅಂದರೆ ಅದು ಬೈಕ್ ಟ್ಯಾಕ್ಸಿ. ವೈಟ್ ಬೋರ್ಡ್‌ನಲ್ಲಿ ಬೈಕ್ ಟ್ಯಾಕ್ಸಿ ಓಡಿಸೋದು ಸೇರಿ ಸುರಕ್ಷತೆ ವಿಚಾರದಲ್ಲಿ ಬೈಕ್ ಟ್ಯಾಕ್ಸಿ ಒಂದು ಹೆಜ್ಜೆ ಹಿಂದೆಯೇ ಉಳಿದುಕೊಂಡಿದೆ.

ಇದೇ ಕಾರಣಕ್ಕೆ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗೆ ಇಳಿಯುವ ಹಾಗಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಆರ್‌ಟಿಓ ಕೂಡ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗಿಳಿಸಿದರೆ ಅಂಥವರ ವಿರುದ್ಧ ಕ್ರಮಕ್ಕೆ ಮುಂದಾಗಲಿದೆ.

ಇನ್ನೂ ತಂತ್ರಾಂಶ ಜೋಡಣೆಯಾಗದೆ ಸರಿಯಾಗಿ ಕಾರ್ಯನಿರ್ವಹಿಸದ ಸ್ಮಾರ್ಟ್‌ ಮೀಟರ್‌! ಗ್ರಾಹಕರ ದೂರು

Leave a Reply

Your email address will not be published. Required fields are marked *