BBMP
Loading ...

Mantri Mall

Greater Bengaluru News9 : ಬೆಂಗಳೂರಿನ ಪ್ರಖ್ಯಾತ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದ್ದು, ಸುಮಾರು ಮೂವತ್ತು ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಜಿಬಿಎ ಪಶ್ಚಿಮ ನಗರ ಪಾಲಿಕೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಇದರಿಂದ ಮಾಲ್‌ನಲ್ಲಿರುವ ನೌಕರರು ಮತ್ತು ಅಂಗಡಿ ಮಾಲೀಕರು ಕಂಗಾಲಾಗಿದ್ದಾರೆ.

ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್​ ಅಭಿಷೇಕ್ ಡೆವೆಲಪರ್ಸ್ ತಾರಿಗೆ ಅವರ ಒಡೆತನದ್ದಾಗಿದೆ. ಮಾಲ್ ಮಾಲೀಕರಿ ಜಿಬಿಎಗೆ ಕಟ್ಟಬೇಕಾಗಿರುವ ತೆರಿಗೆಯನ್ನ ಸರಿಯಾಗಿ ಪಾವತಿ ಮಾಡಿಲ್ಲ. ಇವ್ರು 30 ಕೋಟಿ 81 ಲಕ್ಷದ 45 ಸಾವಿರದ 600 ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗ್ತಿದೆ. ಈ ಕಾರಣಕ್ಕೆ ಮಂತ್ರಿ ಮಾಲ್​​ಗೆ ಬೀಗ ಹಾಗಿ ಸೀಜ್ ಮಾಡಲಾಗಿದೆ.

ತೆರಿಗೆ ಪಾವತಿ ಬಗ್ಗೆ ಜಿಬಿಎ ಹಲವು ಬಾರಿ ನೋಟಿಸ್ ಕೊಟ್ಟಿದ್ರು ಮಂತ್ರಿ ಮಾಲ್​ ಆಡಳಿತ ವರ್ಗ ಯಾವುದೇ ಪ್ರತಿಕ್ರಿ ನೀಡಿಲ್ಲ. ಹೀಗಾಗಿ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿ ನೋಟಿಸ್​ ಅಂಟಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್ , “ಗಾಂಧಿನಗರ ವಿಧಾನಸಭಾ ಕ್ಷೇತ್ರಕ್ಕೆ ಮಂತ್ರಿ ಮಾಲ್ ಸೇರಿದ್ದು, ಆಸ್ತಿ ತೆರಿಗೆ ಪಾವತಿಸದ ಕಾರಣ ಸೀಜ್ ಮಾಡಲಾಗಿದೆ. ಹಲವಾರು ಬಾರಿ ನೋಟಿಸ್ ನೀಡಿದ್ದೇವೆ. ಮಂತ್ರಿ ಮಾಲ್ ನಷ್ಟದಲ್ಲಿ ಇರಲಿಕ್ಕಿಲ್ಲ. ನಿಯಮದ ಪ್ರಕಾರ ತೆರಿಗೆ ಪಾವತಿಸಬೇಕು” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *