BBMP
Loading ...

jj

Greater Bengaluru News9: ನಗರದಲ್ಲಿ ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕಾರಣಗಳಿಂದ ಬೇರೆ ರಾಜ್ಯಗಳಿಂದ ವಾಸವಾಗುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದೆ. ಆದರೆ ಅನೇಕ ಪಿಜಿಗಳು ಮೂಲಭೂತ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು ಅಸುರಕ್ಷಿತ ಪಿಜಿಗಳ ವಿರುದ್ಧ ಕಟ್ಟುನಿಟ್ಟಿನ ಕಾರ್ಯಾಚರಣೆ ಆರಂಭಿಸಿದ್ದಾರೆ.

ಜನವರಿ ತಿಂಗಳಲ್ಲೇ ಶಾಂತಿನಗರ, ಸಿ.ವಿ.ರಾಮನ್‌ನಗರ, ಗಾಂಧಿನಗರ, ಶಿವಾಜಿನಗರ, ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸಿದ್ದು, ನಿಯಮ ಉಲ್ಲಂಘನೆ ಕಂಡುಬಂದ 574 ಪಿಜಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಡುಗೆ ಕೋಣೆ ಶುಚಿತ್ವ, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದ 8 ಪಿಜಿಗಳಿಗೆ ಬೀಗ ಹಾಕಲಾಗಿದ್ದು, ಇತರೆ ಉಲ್ಲಂಘನೆಗಳಿಗೆ ಒಟ್ಟೂ ₹3.09 ಲಕ್ಷ ದಂಡ ವಿಧಿಸಲಾಗಿದೆ.

ಈ ಕುರಿತು ಪಿಜಿ ಮಾಲೀಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಏಕಾಏಕಿ ನಡೆಯುತ್ತಿರುವ ಕಾರ್ಯಾಚರಣೆಯಿಂದ ಪಿಜಿ ಮಾಲೀಕರು ಕಳವಳಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇತ್ತ ವಿಲ್ಸನ್ ಗಾರ್ಡನ್‌ನ ಪಿಜಿ ಮಾಲೀಕ ಶರಣೇಶ್ ಪ್ರತಿಕ್ರಿಯಿಸಿ, ನಿಯಮಗಳನ್ನು ಪಾಲಿಸುವುದು ಹಾಗೂ ಅಧಿಕಾರಿಗಳಿಗೆ ಸಹಕರಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.

ಪರಿಶೀಲನೆಗೆ ಒಳಪಟ್ಟ ಎಲ್ಲಾ ಪಿಜಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ನ್ಯೂನ್ಯತೆಗಳನ್ನು ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪಿಜಿಗಳಿಗೆ ಬೀಗ ಬೀಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *