ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಶ್ರೀ ಗಿರೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗಿರೀಶ್ ಅವರು ಕೆಂಗೇರಿ ವಿಭಾಗದ ಲೆಕ್ಕಾಧಿಕಾರಿಗಳು. ಇದೀಗ ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದಲೇ ಗಿರೀಶ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗಿದೆ. ಉನ್ನತ ಮಟ್ಟಕ್ಕೇರಿರುವ ಗಿರೀಶ್ ಅವರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲಿ ಎಂದು ಎಲ್ಲರು ಹಾರೈಸಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2024: ಸಾರ್ವಜನಿಕರ ಸಲಹೆಗೆ ಬಿಬಿಎಂಪಿ ಆಹ್ವಾನ


