ಬೆಂಗಳೂರು:- ರಾಜ್ಯ ಸರ್ಕಾರವು ಇ-ಖಾತಾ ನಿರೀಕ್ಷೆಯಲ್ಲಿರುವ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ.
ಕರ್ನಾಟಕ ಸರ್ಕಾರದ ಸಚಿವ ಸಂಪುಟವು ಗ್ರಾಮೀಣ ಪ್ರದೇಶಗಳಲ್ಲಿ ಇ-ಖಾತಾ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ವಿಧೇಯಕ ಅಂಗೀಕರಿಸಿದರೆ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮಠಾಣಾ ವ್ಯಾಪ್ತಿಯಲ್ಲಿ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ನೀಡಿದಂತಾಗುತ್ತದೆ.
ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ-ನೋಂದಣಿದಾರರಿಗೆ ಆಸ್ತಿ ನೋಂದಣಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸುವಂತೆ ಆದೇಶಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.
ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸ ಸುಗಮವಾಗಿ ವಿತರಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿತ್ತು. ಈಗಾಗಲೇ ಇ ಖಾತಾ ಕುರಿತು ಸೃಷ್ಟಿಯಾಗಿರುವ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಿತ್ತು. ಇತ್ತೀಚೆಗೆ ವಿಕಾಸಸೌಧದಲ್ಲಿ ಮೂವರು ಸಚಿವರ ನೇತೃತ್ವದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ಏಪ್ರಿಲ್ನಿಂದ ಬೆಂಗಳೂರಿನಲ್ಲಿ ಕಸಕ್ಕೂ ಶುಲ್ಕ ವಸೂಲಿ: ಸೇವಾ ಶುಲ್ಕ ಸಂಗ್ರಹಕ್ಕೆ ಸರ್ಕಾರ ಅನುಮೋದನೆ


