ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಆಯವ್ಯಯದಡಿ ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳಿಗೆ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ / ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳು
* ಒಂಟಿ ಮನೆ ನಿರ್ಮಾಣ ಮತ್ತು ಅಮೃತ ಮಹೋತ್ಸವ ಯೋಜನೆಯಡಿ ಫ್ಲಾಟ್ ಖರೀದಿಗೆ ಧನ ಸಹಾಯ
* ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ
* ಪೌರ ಕಾರ್ಮಿಕರು ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ನಿಕ್ ದ್ವಿಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರಥಮ ಆದ್ಯತೆ)
* ವಿಶೇಷ ಚೇತನರಿಗೆ ಹೆಚ್ಚುವರಿ ಚಕ್ರ ಅಳವಡಿಸಿದ ಎಲೆಕ್ನಿಕ್ ತ್ರಿಚಕ್ರ ವಾಹನ ಮತ್ತು ವೀಲ್‌ಚೇರ್ ವಿತರಣೆ
* ಗಂಭೀರ ಕಾಯಿಲೆ, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಅಂಗ ವೈಫಲ್ಯ ಶಸ್ತ್ರ ಚಿಕಿತ್ಸೆಗೆ ಧನಸಹಾಯ
* ಬೀದಿಬದಿ ವ್ಯಾಪಾರಸ್ಥರಿಗೆ ಎಲೆಕ್ನಿಕ್ ವೆಂಡಿಂಗ್ ಮೆಷಿನ್ ವಿತರಣೆ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗಗಳ ಪೌರಕಾರ್ಮಿಕ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ
* ಸಂಗೀತ ಸಾಧನ ಖರೀದಿ, ಕ್ರೀಡಾಪಟುಗಳಿಗೆ ಸಹಾಯಧನ, ಸ್ವಯಂ ಉದ್ಯೋಗ, ವಿಶೇಷ ಚೇತನರಿಗೆ ಔಷಧಿ ಅಂಗಡಿ ಪ್ರಾರಂಭ, ಆಟೋ / ಕಾರು ಖರೀದಿಗೆ ಸಹಾಯ
* ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ
* ಸಾಂಸ್ಕೃತಿಕ ಹಾಗೂ ವಿಶೇಷಚೇತನ ವಿದ್ಯಾ ಸಂಸ್ಥೆಗಳಗೆ ಆರ್ಥಿಕ ನೆರವು
* ಶಾಲಾ ಶುಲ್ಕ ಮರುಪಾವತಿ, ಉನ್ನತ / ವಿದೇಶ ವ್ಯಾಸಂಗಕ್ಕೆ ಸಹಾಯಧನ
* ಅರ್ಜಿಗಳನ್ನು ಸಂಬಂಧಿತ ವಲಯ ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ಕಛೇರಿಯಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು. ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಲು ಈ ದಿನಾಂಕವನ್ನು ವಿಸ್ತರಿಸಲಾಗಿದೆ.
ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಸಾರ್ವಜನಿಕರು ಕಲ್ಯಾಣ ಕಾರ್ಯಕ್ರಮದ ಫಲಾನುಭವಿಗಳಾಗಬೇಕೆಂಬ ಉದ್ದೇಶದಿಂದ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ರವರ ನಿರ್ದೇಶನದಂತೆ ಅರ್ಜಿ ಸಲ್ಲಿಸಲು ಕೊನೆಯ ದಿನ 02-05-2025ರವರೆಗೆ ವಿಸ್ತರಿಸಲಾಗಿದೆ.
ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ: ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ


