BBMP
Loading ...

linemen

ಚಾಮರಾಜನಗರ : ಉದ್ಯೋಗಾಕಾಂಕ್ಷಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಕೆ.ಜೆ. ಜಾರ್ಜ್, ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದೆ. ಲೈನ್ ಮನ್ ಗಳ ನೇಮಕಾತಿ ಮಾಡಿಕೊಳ್ಳುವ ಸಂದರ್ಶನವನ್ನು ಒಂದೇ ದಿನದಲ್ಲಿ ಕೈಗೊಳ್ಳಲಾಗುವುದು. ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ಏಕಕಾಲದಲ್ಲೇ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಏಕಕಾಲದಲ್ಲಿ 2200 ಲೈನ್ ಮ್ಯಾನ್ ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಸಿಗಲಿದೆ. ಈ ಹಿಂದೆ ಲೈನ್ ಮನ್ ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೇ ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು ಇದರಿಂದ ಸಮಸ್ಯೆಯಾಗುತ್ತಿದ್ದು, ಇದೀಗ ಈ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಮದ್ಯ ಮಾರಾಟ ಬಂದ್ ವಾಪಸ್! ಇಂದು ಸಿಗತ್ತೆ ಎಣ್ಣೆ!

Leave a Reply

Your email address will not be published. Required fields are marked *