ಬೆಂಗಳೂರು ಹಿಂದಿನ ವರ್ಷದ ವಿದ್ಯಾರ್ಥಿಗಳ ಶುಲ್ಕಗಳಲ್ಲಿ ಉಳಿಸಿಕೊಂಡಿರುವ ಮೊತ್ತದಲ್ಲಿಯೇ ಕಾಲೇಜಿನ ವಿದ್ಯುತ್ ಮತ್ತು ನೀರಿನ ಬಿಲ್ ಅನ್ನು ಪಾವತಿಸುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳಿಂದ ಶುಲ್ಕಗಳನ್ನು ಸಂಗ್ರಹಿಸಮು ಮತ್ತು ಈ ಶುಲ್ಕಗಳನ್ನು ಆಯಾ ಕಾಲೇಜುಗಳಲ್ಲಿಯೇ ಉಳಿಸಿಕೊಂಡು ಸಂಸ್ಥೆಗಳ ಅಭಿವೃದ್ಧಿಗಾಗಿ ಬಳಸಿಕೊಳ್ಳಲು ಅನುಮೋದನೆ ನೀಡಲಾಗಿತ್ತು. ಈ ಮೊತ್ತದಲ್ಲಿಯೇ ಕಾಲೇಜಿನ ವಿದ್ಯುತ್ ಮತ್ತು ನೀರಿನ ಬಿಲ್ ಮೊತ್ತವನ್ನು ಪಾವತಿಸಲು ಅನುಮತಿ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಆಯುಕ್ತರು ತಿಳಿಸಿದ್ದಾರೆ.
ಭಾರತದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಶೇ. 66ರಷ್ಟು ಉದ್ಯಮಿಗಳಿಂದ ಲಂಚ: ಸಮೀಕ್ಷಾ ವರದಿ


