ಬೆಂಗಳೂರು: ಕರ್ನಾಟಕದಲ್ಲಿ BPL ರದ್ದಾಗುತ್ತದೆ ಎಂಬ ವಿಷಯ ಜೋರಾಗುತ್ತಿದ್ದಂತೆ ಸರ್ಕಾರದ ವಿರುದ್ಧ ಜನತೆ ಮುಗಿ ಬಿದ್ದಿದ್ದಾರೆ.
ರಾಜ್ಯದ ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ವರಿಕೆ ನೀಡಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ. ಸರ್ಕಾರಿ ನೌಕರರು ಅಲ್ಲದ ಹಾಗೂ ತೆರಿಗೆ ಕಟ್ಟುದವರ ಕುಟುಂಬಗಳ ಬಿಪಿಎಲ್ ಕಾರ್ಡ್ಗಳು ಸಹ ರಿಜೆಕ್ಟ್ ಆಗಿವೆ. ಇದರಿಂದ ನೊಂದ ಜನರು ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


