BBMP
Loading ...

BBMP Election

ಬೆಂಗಳೂರು: 2020ರಿಂದ ಬಿಬಿಎಂಪಿ ಚುನಾವಣೆ (BBMP elections) ನಡೆದಿಲ್ಲ. ಈಗೊಮ್ಮೆ, ಆಗೊಮ್ಮೆ ಮಾಡುವುದಾಗಿ ಹೇಳಿ ಮುಂದೂಡಿಕೊಂಡು ಬರಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಏಕೆಂದರೆ ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್​ನಲ್ಲಿ ಚುನಾವಣೆ ನಡೆಸುತ್ತೇವೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ಗೆ (Supreme Court) ಅಫಿಡವಿಟ್ ಸಲ್ಲಿಸಿದೆ.

ಹೌದು. ನವೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಅಗತ್ಯವಿದ್ದರೆ ನವೆಂಬರ್ ಒಳಗೂ ಪ್ರಕ್ರಿಯೆ ಮುಗಿಸಲಾಗುವುದು. ವಾರ್ಡ್​ ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಅಂತ್ಯಗೊಳಿಸಲಾಗುವುದು ಎಂದು ಸುಪ್ರೀಂಕೋರ್ಟ್​ಗೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.

ಬಿಬಿಎಂಪಿ ವಾರ್ಡ್​​ ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿವೆ. ಕರ್ನಾಟಕ ಸರ್ಕಾರ ಸಲ್ಲಿರುವ ಅಫಿಡವಿಟ್​​ನಲ್ಲಿ, ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ಉಲ್ಲೇಖಿಸಲಾಗಿದೆ.

ಈ ಹಿಂದಿನ ಬಿಬಿಎಂಪಿಯ ಸದಸ್ಯರ ಅಧಿಕಾರ ಅವಧಿ 2020 ಸೆಪ್ಟೆಂಬರ್ 10ರಂದು ಮುಕ್ತಾಯಗೊಂಡಿತ್ತು. ಡಿಸೆಂಬರ್ 18ರಂದು ಬೆಂಗಳೂರು ಆಡಳಿತಕ್ಕೆ ಅಂಗೀಕರಿಸಲಾದ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಕಡ್ಡಾಯವಾಗಿ 243 ವಾರ್ಡ್‌ಗಳ ಬದಲಿಗೆ 198 ವಾರ್ಡ್‌ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು, ನಾಳೆ ಶಿಕ್ಷೆ ಪ್ರಮಾಣ ಪ್ರಕಟ

Leave a Reply

Your email address will not be published. Required fields are marked *