BBMP
Loading ...

HDK

Greater Bengaluru News9 : ತಂದೆ ದೇವೇಗೌಡರು ಆರೋಗ್ಯವಾಗಿದ್ದಾರೆ, ಆತಂಕ ಬೇಡ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಮೂರು ನಾಲ್ಕು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದರು.

ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಇನ್ನೂ ಸದ್ಯ ಮಣಿಪಾಲ್‌ ಆಸ್ಪತ್ರೆಗೆ ದೇವೇಗೌಡರನ್ನ ದಾಖಲಿಸಲಾಗಿದ್ದು, ಆರೋಗ್ಯ ಸುಧಾರಣೆ ಆಗುವವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಸಂಪೂರ್ಣವಾಗಿ ಆರೋಗ್ಯ ಚೇತರಿಕೆ ಬಳಿಕ ಡಿಸ್ಸಾರ್ಜ್ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *