BBMP
Loading ...

Hasanamba

ಹಾಸನ: ಅಧಿದೇವತೆ, ಬೇಡಿದ ವರವ ನೀಡುವ ಮಹಾತಾಯಿ ಹಾಸನಾಂಬೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆ ಉತ್ಸವಕ್ಕೆ ಇದೀಗ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ಜರುಗಲಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 13 ದಿನ ಭಕ್ತರಿಗೆ ಹಾಸನಾಂಬೆ ದರುಶನ ಕರುಣಿಸಲಿದ್ದಾಳೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ನಡೆಯಿತು. ಶಾಸಕರಾದ ಸ್ವರೂಪ್, ಸಿಮೆಂಟ್ ಮಂಜು, ಶಿವಲಿಂಗೇಗೌಡ ಭಾಗಿಯಾಗಿದ್ದರು.

ದಿನಾಂಕ: 2025ರಲ್ಲಿ ಹಾಸನಾಂಬ ದರ್ಶನೋತ್ಸವವು ಅಕ್ಟೋಬರ್ 9 ರಿಂದ ಅಕ್ಟೋಬರ್ 23 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಒಟ್ಟು 15 ದಿನಗಳ ಕಾಲ ದೇವಾಲಯದ ಬಾಗಿಲು ತೆರೆದಿರಲಿದ್ದು, 13 ದಿನಗಳ ಕಾಲ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರಲಿದೆ.

ಸಮಯ: ದೇವಾಲಯವು ಸಾಮಾನ್ಯವಾಗಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10:30 ರವರೆಗೆ ತೆರೆದಿರುತ್ತದೆ, ಆದರೆ ಕೆಲವು ದಿನಗಳಲ್ಲಿ 24 ಗಂಟೆಯೂ ದರ್ಶನಕ್ಕೆ ಅವಕಾಶವಿರಬಹುದು. ನೈವೇದ್ಯ ಪೂಜೆಯ ಸಮಯದಲ್ಲಿ (ಮಧ್ಯಾಹ್ನ 1:30 ರಿಂದ 3:00 ಗಂಟೆಯವರೆಗೆ ಮತ್ತು ಮುಂಜಾನೆ 2:00 ರಿಂದ 4:00 ಗಂಟೆಯವರೆಗೆ) ದರ್ಶನ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಬಹುದು.

ಟಿಕೆಟ್ ವ್ಯವಸ್ಥೆ: ಭಕ್ತರಿಗೆ ದರ್ಶನವನ್ನು ಸುಗಮಗೊಳಿಸಲು ಆನ್‌ಲೈನ್ ಟಿಕೆಟ್‌ಗಳು ಲಭ್ಯವಿರುತ್ತವೆ. ನೇರ ದರ್ಶನಕ್ಕಾಗಿ ₹1000 ಶುಲ್ಕದ ಟಿಕೆಟ್‌ಗಳು ಮತ್ತು ಸರದಿ ಸಾಲಿನಲ್ಲಿ ದರ್ಶನಕ್ಕಾಗಿ QR ಕೋಡ್ ಪಾಸ್‌ಗಳ ವ್ಯವಸ್ಥೆ ಇದೆ. 2025ರಲ್ಲಿ ದರ್ಶನ ಪಾಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಕೆಲವು X ಪೋಸ್ಟ್‌ಗಳು ಸೂಚಿಸಿವೆ, ಆದರೆ ಇದು ದೃಢೀಕೃತವಾಗಿಲ್ಲ.

ವಿಶೇಷತೆ: ಹಾಸನಾಂಬ ದೇವಾಲಯವು 12ನೇ ಶತಮಾನದಿಂದಲೂ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ. ದೇವಾಲಯದ ಗರ್ಭಗುಡಿಯ ಬಾಗಿಲನ್ನು ವರ್ಷಕ್ಕೊಮ್ಮೆ ತೆರೆಯಲಾಗುತ್ತದೆ, ಮತ್ತು ಈ ಸಮಯದಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸುತ್ತಾರೆ. 2024ರಲ್ಲಿ ಸುಮಾರು 20 ಲಕ್ಷ ಭಕ್ತರು ದರ್ಶನ ಪಡೆದಿದ್ದರು, ಮತ್ತು 2025ರಲ್ಲಿಯೂ ಇದೇ ರೀತಿಯ ಭಕ್ತರ ಒತ್ತಡವನ್ನು ನಿರೀಕ್ಷಿಸಲಾಗಿದೆ.

ಜಿಲ್ಲಾಡಳಿತದ ಸಿದ್ಧತೆ: ಭಕ್ತರ ಸುಗಮ ದರ್ಶನಕ್ಕಾಗಿ ಜಿಲ್ಲಾಡಳಿತವು ವಿಶೇಷ ವ್ಯವಸ್ಥೆಗಳನ್ನು ಮಾಡುತ್ತದೆ. ಭದ್ರತೆಗಾಗಿ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳನ್ನು ಮೂರು ಶಿಫ್ಟ್‌ಗಳಲ್ಲಿ ನಿಯೋಜಿಸಲಾಗುತ್ತದೆ. QR ಕೋಡ್ ವ್ಯವಸ್ಥೆಯ ಮೂಲಕ ಸರದಿ ಸಾಲಿನಲ್ಲಿ ದರ್ಶನವನ್ನು ವೇಗಗೊಳಿಸಲಾಗುತ್ತದೆ.
.
ಪೂಜಾ ವಿಧಾನಗಳು: ದೇವಾಲಯದ ಉದ್ಘಾಟನೆಯು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರಂತಹ ಗಣ್ಯರ ಸಮ್ಮುಖದಲ್ಲಿ ನಡೆಯುತ್ತದೆ. ಮೊದಲ ದಿನ ನೈವೇದ್ಯ ಪೂಜೆಯ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಭಕ್ತರಿಗೆ ಸಮಯ ನಿಗದಿ ಮಾಡುವಂತೆ ಸಚಿವ ಕೃಷ್ಣಬೈರೇಗೌಡ ಸಲಹೆ
ಸಭೆಯಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ರಾಜ್ಯದ ಮೂಲೆ ಮೂಲೆಯಿಂದ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಅವರನ್ನು ಗಂಟೆಗಟ್ಟಲೇ ನಿಲ್ಲಿಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿದರು.

ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೆ. ಗೋಲ್ಡ್ ಕಾರ್ಡ್​ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಲಾಗಿದೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು
ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾತನಾಡಿ, ಹಾಸನಾಂಬೆ ಉತ್ಸವ ವೇಳೆ ದರ್ಶನದ ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು ಮಾಡಲಾಗುವುದು. ಪಾಸ್ ಬದಲು ಗೋಲ್ಡ್ ಕಾರ್ಡ್ ಬಳಕೆ ಇರಲಿದ್ದು, ಒಂದು ಗೋಲ್ಡ್ ಕಾರ್ಡ್​ಗೆ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮುಂಜಾನೆ 5ರಿಂದ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *